Ad imageAd image

ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

Bharath Vaibhav
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, 5 ವರ್ಷದ ಪುತ್ರಿ ಹಾಗು ಒಂದುವರೆ ವರ್ಷದ ಪುತ್ರನ ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಬಾಗಲಕುಂಟೆ ಪಾಳ್ಯ ಭುವನೇಶ್ವರಿ ನಗರದಲ್ಲಿ ಈ ಒಂದು ದುರಂತ ಸಂಭವಿಸಿದೆ.ಐದು ವರ್ಷದ ಪುತ್ರಿ ಹಾಗೂ ಒಂದೂವರೆ ವರ್ಷದ ಪುತ್ರನ ಕೊಂದು ತಾಯಿ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಯಚೂರು ಮೂಲದ ವಿಜಯಲಕ್ಷ್ಮಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ವಿಜಯಲಕ್ಷ್ಮಿ ಸಹೋದರಿ ಬಂದು ನೋಡಿದಾಗ ಈ ಒಂದು ಘಟನೆ ಬೆಳಕಿಗೆ ಬಂದಿದೆ.

ಖಾಸಗಿ ಮಾಲ್ ನಲ್ಲಿ ವಿಜಯಲಕ್ಷ್ಮಿ ಪತಿ ಕೆಲಸ ಮಾಡುತ್ತಿದ್ದರು. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!