Ad imageAd image

ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

Bharath Vaibhav
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ
CRIME
WhatsApp Group Join Now
Telegram Group Join Now

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ಮಕ್ಕಳನ್ನೇ ತಾಯಿ ಒಬ್ಬಳು ಭೀಕರವಾಗಿ ಕೊಲೆ ಮಾಡಿದ್ದು ಅಲ್ಲದೇ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇದೀಗ ವರದಿಯಾಗಿದೆ. 7 ವರ್ಷದ ಹಾಗೂ 3 ವರ್ಷದ ಇಬ್ಬರು ಮಕ್ಕಳನ್ನು ತಾಯಿಯೇ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಸುಬ್ರಹ್ಮಣ್ಯ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಕೊಲೆಯಾದ ಮಕ್ಕಳನ್ನು ಹಗ್ಗದಿಂದ ಕುತ್ತಿಗೆಗೆ ಬಿಗಿದು ಶಂಭು (7) ಮತ್ತು ಶಿಯಾ (3) ಎನ್ನುವ ಮಕ್ಕಳನ್ನು ಮಮತಾ ಸಾಹು ಎನ್ನುವ ತಾಯಿ ಕೊಂದಿದ್ದಾಳೆ. ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಭೀಕರವಾದಂತಹ ಕೊಲೆ ನಡೆದಿದ್ದು, ಕೊಲೆ ಕುರಿತಂತೆ ಮಕ್ಕಳ ತಂದೆ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಇದೀಗ ದೂರು ನೀಡಿದ್ದಾರೆ. ಸದ್ಯ ತಂದೆಯ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!