ವಿಜಯಪುರ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ನಾಲ್ವರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ.
ಮೃತ ಮಕ್ಕಳನ್ನು ತನು ನಿಂಗರಾಜ್ ಭಜಂತ್ರಿ (5), ಹಸೇನ್ ನಿಗಂಗರಾಜ್ (2), ರಕ್ಷಾ ನಿಂಗರಾಜ್ ಭಜಂತ್ರಿ (3), 13 ತಿಂಗಳ ಹುಸೇನ್ ಭಜಂತ್ರಿ ಸೇರಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.