ನಿಪ್ಪಾಣಿ: ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಜನಮನ್ನಣೆ ಪಡೆದಿದ್ದ, ಅಪಾರ ಪ್ರಮಾಣದ ಕಾರ್ಯಕರ್ತರ ಬಳಗ ಹೊಂದಿದ್ದ ಸಜ್ಜನ ರಾಜಕಾರಣಿ ಕಾಕಾಸಾಹೇಬ್ ಪಾಟೀಲ ಅವರ ನಿಧನದ ಸುದ್ದಿ ತಿಳಿದು ತೀವ್ರ ದುಃಖವಾಯಿತು ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದರಾದ ಜಗದೀಶ ಶೆಟ್ಟರ ಅವರು ತಿಳಿಸಿದರು.
ಕಾಕಾಸಾಹೇಬ್ ಪಾಟೀಲ ಅವರು ಜನಸೇವೆಗಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಸದಾ ಕಾರ್ಯೋನ್ಮುಖರಾಗಿದ್ದು, ತಮ್ಮ ಸರಳ ವ್ಯಕ್ತಿತ್ವದ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದರು ಎಂದರು.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಕುಟುಂಬಸ್ಥರಿಗೆ ಹಾಗೂ ಕಾರ್ಯಕರ್ತರಿಗೆ ಅವರ ಅಗಲುವಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




