Ad imageAd image
- Advertisement -  - Advertisement -  - Advertisement - 

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂಸದರಾದ ಜಗದೀಶ ಶೆಟ್ಟರ

Bharath Vaibhav
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂಸದರಾದ ಜಗದೀಶ ಶೆಟ್ಟರ
WhatsApp Group Join Now
Telegram Group Join Now

ಬೆಳಗಾವಿ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿ ನಗರದ ಸುತ್ತಲಿನಲ್ಲಿ ರಿಂಗ್ ರೋಡ್ ಅಭಿವೃದ್ಧಿ ಕಾಮಗಾರಿಯ ಭೂ ಸ್ವಾದೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ – ಹುನಗುಂದ – ರಾಯಚೂರು ಮಾರ್ಗದ ರಸ್ತೆ ನಿರ್ಮಾಣದ ಕುರಿತು ಹಾಗೂ ನೈರುತ್ಯ ರೈಲ್ವೆ ವಲಯಕ್ಕೆ ಸಂಬಂಧಿಸಿದಂತೆ ಬೆಳಗಾವಿ – ಕಿತ್ತೂರು – ಧಾರವಾಡ ನೂತನ ರೈಲ್ವೆ ನಿರ್ಮಾಣ ಹಂತದ ಪ್ರಕ್ರಿಯೆ ಕುರಿತು ಚರ್ಚಿಸಿ. ಭೂ ಸ್ವಾದಿನ ಕ್ರಮವನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಸೂಚಿಸಿದರು. ಬೆಳಗಾವಿ ನಗರದ ರಸ್ತೆ ಮೇಲ್ ಸೇತುವೆ ನಿರ್ಮಾಣದ ಕಾಮಗಾರಿ ಪ್ರಗತಿ ಕುರಿತು ಚರ್ಚೆ ನಡೆಸಿ,ರೈಲ್ವೆ 3ನೇ ಗೇಟ್ ಹತ್ತಿರ ನಿರ್ಮಾಣಗೊಳ್ಳುತ್ತಿರುವ ಕಾಮಗಾರಿಯು ಅರ್ಧಕ್ಕೆ ನಿಂತಿರುವ ವಿಷಯವನ್ನು ಪ್ರಸ್ತಾಪಿಸಿ ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಭೀಮಾಶಂಕರ್ ಗುಳೇದ, ಉಪ ಪೊಲೀಸ್ ಆಯುಕ್ತರಾದ ಜಗದೀಶ್ ರೋಹನ್. ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟೆ, NHAI ಯೋಜನಾ ನಿರ್ದೇಶಕರಾದ ಭುವನೇಶ್ವರ್ ಕುಮಾರ್, ಭೂಸ್ವಾಧೀನ ಅಧಿಕಾರಿಗಳಾದ ಚೌಹಾಣ್, ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳಾದ ವಿನಯ್ ಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಬರದ್, ರೈಲ್ವೆ ಲೈನ್ ಭೂ ಸ್ವಾಧೀನ ಅಧಿಕಾರಿಗಳಾದ ಮಾರುತಿ ಬ್ಯಾಕೋಡ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಚರ್ಚೆಯಲ್ಲಿ ಉಪಸ್ಥಿತರಿದ್ದರು

ವರದಿ: ಪ್ರತೀಕ ಚಿಟಗಿ

WhatsApp Group Join Now
Telegram Group Join Now
Share This Article
error: Content is protected !!