Ad imageAd image

ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ:ಸಂಸದ ಜಗದೀಶ್ ಶೆಟ್ಟರ್

Bharath Vaibhav
ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ:ಸಂಸದ ಜಗದೀಶ್ ಶೆಟ್ಟರ್
WhatsApp Group Join Now
Telegram Group Join Now

 ಬೆಳಗಾವಿ: ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲೆ ವತಿಯಿಂದ ವಿಶೇಷ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಸಂಸದ ಜಗದೀಶ್ ಶೆಟ್ಟರ್ ಅವರು ಮಾತನಾಡಿ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಈಗಾಗಲೇ ಹಲವು ಅಭಿವೃದ್ಧಿ ಕಾರ್ಯಗಳು ಯೋಜನೆಗಳ ಬಗ್ಗೆ ಕೇಂದ್ರದ ಮಂತ್ರಿಗಳ ಜೊತೆ ಭೇಟಿಯಾಗಿ ಮಾತನಾಡಿದ್ದೇನೆ ಜಿಲ್ಲೆಗೆ ಹೊಸ ಯೋಜನೆಗಳನ್ನು ತರಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಹೇಳಿದರು
ಸಂಸದ ವಿಶ್ವನಾಥ್ ಹೆಗಡೆ ಕಾಗೇರಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್.ಡಿ.ಎ ಮೈತ್ರಿ ಕೂಟಕ್ಕೆ 19 ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು
ವಿಶೇಷ ಕಾರ್ಯಕಾರಿಣಿ ಸಭೆ ಉದ್ದೇಶಿಸಿ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬೇಸತ್ತು ಜನತೆ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಗಳಿಗೆ ಮತ ಹಾಕಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಿಸಿದ್ದಾರೆ . ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ, ಕಾನೂನು ಬಾಹಿರ ಚಟುವಟಿಕೆ ಹೆಚ್ಚುತ್ತಿದೆ ಮುಡಾ, ಎಸ್.ಟಿ ನಿಗಮ ದಂತಹ ಹಗರಣಗಳ ಕಾರಣಿಕರ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಹೇಳಿದರು.


ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಅವರು ಮಾತನಾಡಿ ಕಾರ್ಯಕರ್ತರ ಶಕ್ತಿ ಪರಿಶ್ರಮದಿಂದ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರ ಗೆಲುವಾಗಿದೆ.ಅಧಿಕಾರದ ಮದ,ಹಣ ಬಲದ ಮೇಲೆ ಮೆರೆಯುತ್ತಿದ್ದವರಿಗೆ ಜಿಲ್ಲೆಯ ಜನತೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ,ಸಂಸದ ಈರಣ್ಣ ಕಡಾಡಿ,ಮಾಜಿ ಸಂಸದೆ ಮಂಗಲ ಅಂಗಡಿ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ಜಗದೀಶ್ ಮೆಟಗುಡ್ಡ, ಮಹಾಂತೇಶ ದೊಡಗೌಡರ, ವಿಶ್ವನಾಥ್ ಪಾಟೀಲ್ , ಅರವಿಂದ ಪಾಟೀಲ, ರತ್ನಾ ಮಾಮನಿ, ಲಕ್ಷ್ಮಣ ತಪಸಿ , ಸಂದೀಪ್ ದೇಶಪಾಂಡೆ, ಧನಶ್ರೀ ದೇಸಾಯಿ,ಕೆ.ವಿ.ಪಾಟೀಲ, ಎಫ್.ಎಸ್.ಸಿಧ್ದನಗೌಡರ್, ನಿತಿನ್ ಚೌಗಲೆ, ಈರಣ್ಣ ಅಂಗಡಿ, ಯಲ್ಲೇಶ್ ಕೋಲಕಾರ, ಮಹೇಶ್ ಮೋಹಿತೆ, ಮಲ್ಲಿಕಾರ್ಜುನ ಮಾದಮ್ಮನವರ, ಶಿವಾನಂದ್ ಹಣುಮಸಾಗರ, ಸಚಿನ್ ಕಡಿ, ಜಗದೀಶ್ ಬೂದಿಹಾಳ,ಬಾಳೇಶ ಚವ್ವನ್ನವರ ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!