ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳ ಸಾರ್ವಜನಿಕರ ಸಮಸ್ಯೆಗಳನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಆಲಿಸಿದರು.
ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಭಾನುವಾರ ಸಂಸದೆ ಪ್ರಿಯಂಕಾ ಜಾರಕಿಹೊಳಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಒಂದಿಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಆಯಾ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಜನರ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ, ಕ್ಷೇತ್ರದ ಜನರ ಸಮಸ್ಯೆಗೆ ಸ್ಪಂದಿಸುವ ಕಾರ್ಯವನ್ನು ಪ್ರಾಮಾಣಿಕತೆಯಿಂದ ಮಾಡಲಾಗುತ್ತಿದೆ. ಕಾರ್ಯಕರ್ತರು ತಮ್ಮ ಸಮಸ್ಯೆಗಳು ಇದ್ದಲ್ಲಿ ನಮ್ಮ ಕಚೇರಿಗೆ ಬಂದು ಬಗೆಹರಿಸಿಕೊಳ್ಳಬೇಕು. ಯಾವುದೇ ಇಲಾಖೆಯ ಸಮಸ್ಯೆ ಇದ್ದರೂ ಸಹ ನಮ್ಮ ಗಮನಕ್ಕೆ ತಂದು ಅದನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ವಿವಿಧ ಹಳ್ಳಿಗಳ ಸಾರ್ವಜನಿಕರು ಇದ್ದರು.




