ಬಾಗಲಕೋಟೆ: -ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಕೋಟೆ ನಗರಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ವಜ್ರಮಟ್ಟಿ ಗ್ರಾಮದ ವಿದ್ಯಾರ್ಥಿನಿ ಅಂಕಿತಾ.ಬಸಪ್ಪ. ಕೊಣ್ಣೂರ ವಿದ್ಯಾರ್ಥಿನಿಯನ್ನು ಸಂಸದ ಪಿ.ಸಿ.ಗದ್ದಿಗೌಡರ ಇವರು ಭೇಟಿಯಾಗಿ ಸನ್ಮಾನಿಸಿ ಗೌರವಿಸಿದರು.
ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ಸರಕಾರಿ ಶಾಲೆಯ ವಿದ್ಯಾರ್ಥಿನಿಯರಿಗೆ ಸರಿಸಾಟಿ ಯಾರು ಇಲ್ಲಾ ಎಂಬುದನ್ನು ಎಸ್ ಎಸ್ ಎಲ್ ಸಿ ಪರೀಕ್ಷೆ ಫಾಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಬಂದು ತೋರಿಸಿ ಸಾಬೀತು ಮಾಡಿದ ಅಂಕಿತಾ ಕೊಣ್ಣೂರ ವಿದ್ಯಾರ್ಥಿನಿ ಬಾಗಲಕೋಟೆ ಜಿಲ್ಲೆಗೆ ಹೆಮ್ಮೆ ತಂದಿದ್ದಾಳೆ ಎಂದು ಸಂಸದ ರತ್ನ ಪಿ ಸಿ ಗದ್ದಿಗೌಡರು ಶ್ಲಾಘನೆ ವ್ಯಕ್ತಪಡಿಸಿದರು.
ಹಾಗೆಯೇ ಅಂಕಿತಾ ಕೊಣ್ಣೂರ ವಿದ್ಯಾರ್ಥಿನಿಯ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 1 ಲಕ್ಷ ರೂ. ಚೆಕ್ ವಿತರಿಸಿ ಆರ್ಥಿಕ ಸಹಾಯ ಕಲ್ಪಿಸಿದರು. ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ವಿದ್ಯಾರ್ಥಿನಿ ನಿರೂಪಿಸಿದ್ದಾಳೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಎಂದು ಶುಭ ಹಾರೈಸಿದರು. ಅಂಕಿತಾ ಳ ತಂದೆ ತಾಯಿಯನ್ನು ಕೂಡ ಇದೇ ಸಂದರ್ಭದಲ್ಲಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸದಸ್ಯರಾದ ಎಫ್. ಆರ್. ಪಾಟೀಲ,,ಗ್ರಾಮದ ಹಿರಿಯರು, ಯುವಕರು, ಗ್ರಾಮ ಪಂಚಾಯತಿ ಸದ್ಯಸರು, ವಿದ್ಯಾರ್ಥಿನಿಯ ತಂದೆ – ತಾಯಿಯವರು ಉಪಸ್ಥಿತರಿದ್ದರು.
ವರದಿ:- ರಾಜೇಶ್. ಎಸ್. ದೇಸಾಯಿ