Ad imageAd image

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ

Bharath Vaibhav
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಂಸದ ತೇಜಸ್ವಿ ಸೂರ್ಯ
WhatsApp Group Join Now
Telegram Group Join Now

ಬೆಂಗಳೂರು:  ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ವಿವಾಹವಾಗಿದ್ದಾರ. ಮದುವೆಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯನ್ನು ಈ ಜೋಡಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿದ್ದಾರೆ.

ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ.

ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಆರತಕ್ಷತೆ ನಡೆಯಲಿದೆ. ಈ ವೇಳೆ ರಾಜ್ಯ-ದೇಶದ ರಾಜಕೀಯ ಗಣ್ಯರು ಭಾಗಿಯಾಗುವ ಸಾಧ್ಯತೆಗಳಿವೆ.

ತಮಿಳುನಾಡು ಮೂಲದ ಶಿವಶ್ರೀ ಅವರು ಈಗಾಗಲೇ ಗಾಯನದಿಂದ ಖ್ಯಾತರಾಗಿದ್ದಾರೆ. ಶಿವಶ್ರೀ ಅವರು ಗಾಯನವಲ್ಲದ ಭರತನಾಟ್ಯ ಕಲಾವಿದೆ ಕೂಡ ಹೌದು. ಮದ್ರಾಸ್ ವಿಶ್ವವಿದ್ಯಾಲಯದಿಂದ ಭರತನಾಟ್ಯದಲ್ಲಿ ಪದವಿಯನ್ನೂ ಗಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!