ಹುಬ್ಬಳ್ಳಿ : ಕೂಡಲಸಂಗಮ ಪಂಚಮಸಾಲಿ ಪೀಠದಲ್ಲಿ ಅಲ್ಲೋಲ ಕಲ್ಲೋಲವೇ ಆಗ್ತಿದೆ.ಕಳೆದ ವಾರ ಮಠಕ್ಕೆ ಜಡಿದಿದ್ದ ಬೀಗವನ್ನು ಭಕ್ತಾದಿಗಳು ಒಡೆದಿದ್ದರು.ಈಗ ಜಯ ಮೃತ್ಯುಂಜಯ ಸ್ವಾಮೀಜಿ ಆಸ್ಪತ್ರೆ ಸೇರಿದ್ದಾರೆ.
ಅದೆಲ್ಲವೂ ಪ್ರಚಾರದ ಗಿಮಿಕ್ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಾಮಸಾಲಿ ಪೀಠದ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದ್ದಾರೆ.
ಕೂಡಲ ಸಂಗಮ ಲಿಂಗಾಯಿತ ಪಂಚಾಮಸಾಲಿ ಪೀಠಕ್ಕೆ ನೂತನ ಸ್ವಾಮೀಜಿ ನೇಮಕ ಮಾಡುತ್ತೇವೆ ಎಂದು ವಿಜಯಾನಂದ ಕಾಶಪ್ಪನವರ್ ಘೋಷಿಸಿದ್ದಾರೆ. ಅಲ್ಲದೇ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಚಾರದ ಗಿಮಿಕ್ ಎಂದು ಕಿಡಿಕಾರಿದ್ದಾರೆ




