ಬೆಂಗಳೂರು: -ಪೀಣ್ಯ ದಾಸರಹಳ್ಳಿ ಭಾರತ ದೇಶದ ಸಂಸ್ಕೃತಿ ಆಚಾರ ವಿಚಾರಗಳಿಗೆ ತಕ್ಕಂತೆ ಸ್ತ್ರೀಶಕ್ತಿ ಮಹಿಳಾ ಸಬಲೀಕರಣಕ್ಕೆ ಸ್ವಯಂ ಪ್ರೇರಿತರಾಗಿ ಒತ್ತು ನೀಡಬೇಕು ಎಂದು ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಕೂಡಲ ಸಂಗಮ ಸ್ವಾಮಿಗಳು ಹೇಳಿದರು.
ಅವರು ಸಮೀಪದ ಲಗ್ಗೆರೆ ವಾರ್ಡಿನ ಕಾಂಗ್ರೆಸ್ ಪ್ರಭಾವಿ ಮುಖಂಡ ಅರ್ಪಿತ ಟ್ರಸ್ಟ್ ಅಧ್ಯಕ್ಷ ಹಾಗೂ ವಿದ್ಯಾರ್ಥಿಗಳ ಮಿತ್ರ ಲಗ್ಗೆರೆ ನಾರಾಯಣಸ್ವಾಮಿ ಅವರ ಗೃಹ ಕಚೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವ ನಿಮಿತ್ತ ಮನೆ ಮನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಎಂಬ ಅಭಿಯಾನ ಕಾರ್ಯಕ್ರಮ ಲಗ್ಗೆರೆ ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ಪಾಲಿಕೆ ಮಾಜಿ ಸದಸ್ಯೆ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಮಂಜುಳಾ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ತಮ್ಮ ಗೃಹ ಕಚೇರಿಯಲ್ಲಿ ಮನೆ ಮನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಎಂಬ ಅಭಿಯಾನಕ್ಕೆ ಕೂಡಲ ಸಂಗಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳು ಕಿತ್ತೂರು ರಾಣಿ ಚೆನ್ನಮ್ಮನ ಭಾವಚಿತ್ರಕ್ಕೆ ಪೂಜೆ ಪುನಸ್ಕಾರ ಸಲ್ಲಿಸಿ ಅಭಿಯಾನಕ್ಕೆ ಸಾನಿಧ್ಯ ವಹಿಸಿ ಚಾಲನೆ ನೀಡಿ ಶ್ರೀಗಳು ಮಾತನಾಡಿದರು.
ಬೆಂಗಳೂರಿನ ಪ್ರತಿ ಮನೆ ಮನೆಯಲ್ಲೂ ಮತ್ತು ರಾಜ್ಯಾದ್ಯಂತ ತಲುಪಬೇಕು ಈ ಅಭಿಯಾನವನ್ನು ಸಾರ್ಥಕ ಗೊಳಿಸಲು ನಾಡಿನ ಮಹಿಳೆಯರು ಅಭೂತ ಪೂರ್ವಕ ಬೆಂಬಲಿಸಬೇಕು ಮತ್ತು ಸಹಕಾರ ನೀಡಬೇಕು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ತಮ್ಮೆಲ್ಲರ ಸಹಕಾರ ನಮ್ಮೊಟ್ಟಿಗೆ ಇರಬೇಕು ನಾಡಿನ ನೆಲ ಜಲ ಭಾಷೆ ಮತ್ತು ಮಹಿಳೆಯರಿಗೆ ನೀಡುವ ಗೌರವ ಇವೆಲ್ಲವನ್ನೂ ಮೈಗೂಡಿಸಿಕೊಂಡು ಹೋಗಬೇಕು
ಮಹಿಳೆಯರಿಗೆ ಮೊದಲು ಆದ್ಯತೆ ನೀಡಬೇಕು ನಿಟ್ಟಿನಲ್ಲಿ ಈ ಅಭಿಯಾನಕ್ಕೆ ನಾವು ನೀವು ಬೆಂಬಲಿಸಬೇಕೆಂದು ಎಂದು ಲಗ್ಗೆರೆ ನಾರಾಯಣ ಸ್ವಾಮಿ ಅವರ ಧರ್ಮ ಪತ್ನಿ ಶ್ರೀಮತಿ ಮಂಜುಳಾ ನಾರಾಯಣ ಸ್ವಾಮಿ ಮತ್ತು ಸುಪುತ್ರ ಕುಶಾಲ ಗೌಡ ಹಾಗೂ ಕುಟುಂಬ ಸಮೇತರಾಗಿ ಕೂಡಲ ಸಂಗಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಗಳ ಪಾದ ಪೂಜೆ ಮಾಡುವುದರೊಂದಿಗೆ ಹೂವುಗಳ ಸರಮಾಲೆಯೊಂದಿಗೆ ಶ್ರೀಗಳ ಆಶೀರ್ವಾದ ಪಡೆದು ನಾರಾಯಣ ಸ್ವಾಮಿ ಮಾತಾಡಿದರು.
ಮಾಜಿ ಪಾಲಿಕೆ ಸದಸ್ಯ ಹಾಗೂ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಶ್ರೀಮತಿ ಮಂಜುಳಾ ನಾರಾಯಣ ಸ್ವಾಮಿ ಅವರು ಸರ್ವರಿಗೂ ಸ್ವಾಗತ ಕೋರಿದರು.
ಈ ಸಂದರ್ಭದಲ್ಲಿ ಲಗ್ಗೆರೆ ವಾರ್ಡಿನ ಕಾಂಗ್ರೆಸ್ ಅಧ್ಯಕ್ಷ ಹನುಮಂತೆ ಗೌಡ, ರಾಜಗೋಪಾಲನಗರ ವಾರ್ಡಿನ ಮಲ್ಲೇಶ್, ಭೀಮಣ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದು ಶ್ರೀಗಳ ಆಶೀರ್ವಾದ ಪಡೆದವರು.
ವರದಿ:- ಅಯ್ಯಣ್ಣ ಮಾಸ್ಟರ್