Ad imageAd image

ಲಯನ್ಸ್ ಸಂಸ್ಥೆಯಿಂದ ನಿಸ್ವಾರ್ಥ ಜನಪರ ಸೇವೆ : ಶಾಸಕ ಎಂ.ಟಿ.ಕೃಷ್ಣಪ್ಪ ಶ್ಲಾಘನೆ

Bharath Vaibhav
ಲಯನ್ಸ್ ಸಂಸ್ಥೆಯಿಂದ ನಿಸ್ವಾರ್ಥ ಜನಪರ ಸೇವೆ :  ಶಾಸಕ ಎಂ.ಟಿ.ಕೃಷ್ಣಪ್ಪ ಶ್ಲಾಘನೆ
WhatsApp Group Join Now
Telegram Group Join Now

———————————————————————–ಶಾಸಕರಿಂದ 10 ಲಕ್ಷ ಅನುದಾನ ಭರವಸೆ

ತುರುವೇಕೆರೆ: ಯಾವುದೇ ಸರ್ಕಾರ ಎಂತಹ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದರೂ ಅದು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪುವುದು ಕಷ್ಟಸಾಧ್ಯ. ಇಂತಹ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಕಳೆದ 35 ವರ್ಷದಿಂದ ತುರುವೇಕೆರೆ ತಾಲ್ಲೂಕಿನ ಜನರಿಗೆ ಆರೋಗ್ಯ ಸೇರಿದಂತೆ ಹತ್ತು ಹಲವು ರೀತಿಯಲ್ಲಿ ನಿಸ್ವಾರ್ಥ ಮನೋಭಾವದಿಂದ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.

ಪಟ್ಟಣದ ಲಯನ್ಸ್ ಕ್ಲಬ್, ಕಲ್ಪತರು ಲಯನ್ಸ್ ಚಾರಿಟಬಲ್ ಟ್ರಸ್ಸ್ ಸಂಯುಕ್ತಾಶ್ರಯದಲ್ಲಿ ನಿರ್ಮಿಸಿರುವ ನೂತನ ಲಯನ್ಸ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಣ ಸಂಪಾದನೆ ಮಾಡಬಹುದು, ಆದರೆ ಆರೋಗ್ಯ ಸಂಪಾದನೆ ಮಾಡಲು ಸಾಧ್ಯವಿಲ್ಲ. ಜನರ ಸೇವೆಗಾಗಿಯೇ ನಿರ್ಮಿಸಿರುವ ನೂತನ ಭವನದಲ್ಲಿ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ.

ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಧನಸಹಾಯ, ನೆರವನ್ನು ನೀಡುತ್ತಿರುವ ಲಯನ್ಸ್ ನೂತನ ಭವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಸೂಕ್ತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಆಯೋಜಿಸುವ ಕಾರ್ಯವನ್ನು ಮಾಡಲಿ. ಸಂಸ್ಥೆಯು ಈಗಾಗಲೇ ಸುಮಾರು 50 ಸಾವಿರಕ್ಕೂ ಅಧಿಕ ಮಂದಿಗೆ ನೇತ್ರದಾನ ಮಾಡಿದ ಕೀರ್ತಿ ಸಂಪಾದಿಸಿದೆ. ಮುಂದಿನ ದಿನಗಳಲ್ಲಿ ಭವನದಲ್ಲಿ ಕಣ್ಣಿನ ಆಸ್ಪತ್ರೆಯನ್ನು ಪ್ರಾರಂಭಿಸಲಿ. ಈ ಮಹತ್ಕಾರ್ಯಕ್ಕೆ ಶಾಸಕರ ಅನುದಾನದಿಂದ 10 ಲಕ್ಷ ರೂಗಳನ್ನು ನೀಡುವುದಾಗಿ ಭರವಸೆ ನೀಡಿದರು.

ಲಯನ್ಸ್ ಕಛೇರಿ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ, ಲಯನ್ಸ್ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್ ಮಾತನಾಡಿ, ಸಾಮಾಜಿಕ ಸ್ವಾಸ್ಥ್ಯ ಹಾಗೂ ನಾಗರೀಕರ ಆರೋಗ್ಯದ ಬಗ್ಗೆ ಸರ್ಕಾರಕ್ಕಿಂತ ಹೆಚ್ಚು ಕಾಳಜಿಯನ್ನು ವಹಿಸಿ ಕಳೆದ ಮೂರು ದಶಕದಿಂದ ಲಯನ್ಸ್ ಸಂಸ್ಥೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿನ ಅಸಹಾಯಕರು, ಅಶಕ್ತರಿಗೆ ಅಗತ್ಯ ಸೌಲಭ್ಯವನ್ನು ಒದಗಿಸುವ, ಅಂಧರಿಗೆ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆಯ ಮೂಲಕ ದೃಷ್ಟಿ ನೀಡುವ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು, ಸರ್ಕಾರಿ ಶಾಲೆಗಳಿಗೆ ಶೈಕ್ಷಣಿಕ ಪರಿಕರ ವಿತರಣೆ, ಅನಾರೋಗ್ಯ ಪೀಡಿತರಿಗೆ ಚಿಕಿತ್ಸೆಗೆ ಆರ್ಥಿಕ ನೆರವು, ಪರಿಸರ ಸಂರಕ್ಷಣೆ ಸೇರಿದಂತೆ ನೂರಾರು ಕಾರ್ಯಕ್ರಮಗಳನ್ನು ಸಾಮಾಜಿಕ ಕಳಕಳಿಯನ್ನಿಟ್ಟುಕೊಂಡು ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆಯನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಲಯನ್ಸ್ ಭವನ ನಿರ್ಮಾಣ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ವಿರಕ್ತ ಮಠದ ಶ್ರೀ ಕರಿವೃಷಭದೇಶೀಕೇಂದ್ರ ಶಿವಯೋಗೀಶ್ವರ ಮಹಾಸ್ವಾಮೀಜಿಗಳು ದಿವ್ಯ ಸಾನಿದ್ಯ ವಹಿಸಿ ಆರ್ಶೀವಚನ ನೀಡಿದರು. ಲಯನ್ಸ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಪಿ.ಹೆಚ್.ಧನಪಾಲ್ ಅಧ್ಯಕ್ಷತೆ ವಹಿಸಿದ್ದರು. ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಭವನದ ಆವರಣದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಬಿಪಿ, ಮಧುಮೇಹ, ಹೆಚ್.ಬಿ.ಎ.1ಸಿ., ಬೋನ್ ಮಿನರಲ್ ಡೆನ್ಸಿಟಿ ತಪಾಸಣೆ ನಡೆಸಲಾಯಿತು. ಟ್ರಸ್ಟ್ ಗೌರವಾಧ್ಯಕ್ಷ ಡಾ.ಎ.ನಾಗರಾಜ್, ನಿಮ್ಹಾನ್ಸ್ ಮಾಜಿ ನಿರ್ದೇಶಕ ಡಾ.ಡಿ.ನಾಗರಾಜ್, ಪಪಂ ಅಧ್ಯಕ್ಷೆ ಸ್ವಪ್ನನಟೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ರಂಗನಾಥ್, ಲಯನ್ಸ್ ಜಿಲ್ಲಾ ಛೇರ್ಮನ್ ಸುರೇಶ್ ರಾಮು, ನಿಯೋಜಿತ ಜಿಲ್ಲಾ ರಾಜ್ಯಪಾಲ ಮೋಹನ್, ಶಶಿಧರ್ ಗಂಜಿಗಟ್ಟಿ, ಪ್ರಾಂತ್ಯಾಧ್ಯಕ್ಷ ನೃಪೇಂದ್ರ, ವಲಯಾಧ್ಯಕ್ಷ ಲೋಕೇಶ್, ಟ್ರಸ್ಟ್ ಕಾರ್ಯದರ್ಶಿ ಮಹೇಶ್, ಖಜಾಂಚಿ ಟಿಎವಿ ಗುಪ್ತ, ಸುನಿಲ್ ಬಾಬು, ಸುಮಾ ಮಲ್ಲಿಕ್ ಸೇರಿದಂತೆ ಲಯನ್ಸ್ ಕ್ಲಬ್ ಹಾಗೂ ಟ್ರಸ್ಟ್ ನ ಪದಾಧಿಕಾರಿಗಳು, ನಾಗರೀಕರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್, ತುರುವೇಕೆರೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!