ಬೆಂಗಳೂರು : ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ರದ್ದುಗೊಳಿಸುವಂತೆ ಕೋರಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ಮುಂದುವರಿದ ವಿಚಾರಣೆ ಇಂದು ನಡೆಸಿದ ಕರ್ನಾಟಕ ಹೈಕೋರ್ಟ್, ಸೆ.12ಕ್ಕೆ ಮುಂದೂಡಿ ಆದೇಶ ನೀಡಿದೆ.
ನ್ಯಾ. ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿ ಈ ಆದೇಶ ನೀಡಿದೆ. ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು ವಾದ ಮಂಡಿಸಿ, ಪಿಸಿ ಕಾಯ್ದೆಯ ಸೆಕ್ಷನ್ 17A ಅಡಿ ಅಭಿಯೋಜನಾ ಮಂಜೂರಾತಿ ನೀಡುವಾಗ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಸ್‌ಒಪಿ ಅಡಿ ರಾಜ್ಯಪಾಲರು ತನಿಖಾಧಿಕಾರಿಯಿಂದ ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಬೇಕಿತ್ತು. ಆದರೆ ಸಿಎಂ ವಿಚಾರದಲ್ಲಿ ಖಾಸಗಿ ವ್ಯಕ್ತಿಗಳ ದೂರನ್ನು ಅವಲಂಬಿಸಲಾಗಿದೆ.
1998ರಲ್ಲಿ ಡಿನೋಟಿಫೈ ಆಗಿದೆ ಎಂದಿದ್ದಾರೆ. 20 ವರ್ಷಕ್ಕೂ ಅಧಿಕ ಹಳೆಯ ಪ್ರಕರಣವಾಗಿದ್ದೂ, ಈ ಕೇಸ್ನಲ್ಲಿ ಪೊಲೀಸ್ ಅಧಿಕಾರಿಗಳು ದೂರು ನೀಡಿಲ್ಲ. ಮಾರ್ಗಸೂಚಿಗಳನ್ನು ಗಾಳಿಗೆ ತೂರಲಾಗಿದೆ. ಗರ್ವನರ್ ಖಾಸಗಿ ವ್ಯಕ್ತಿಯಿಂದ ಮಾಹಿತಿ ಪಡೆದಿದ್ದಾರೆ. ಇದು ಕಾನೂನು ಬಾಹಿರವಾಗಿದ್ದು ದೂರುದಾರರ ಅರ್ಜಿಗಳನ್ನು ತಿರಸ್ಕರಿಸಬೇಕು ಎಂದು ಕೋರ್ಟ್ ಗಮನಕ್ಕೆ ತಂದರು.
ಇನ್ನು ದೂರುದಾರರ ಸ್ನೇಹಮಯಿ ಕೃಷ್ಣ ಪರವಾಗಿ ಪ್ರತಿವಾದಿದ ವಕೀಲೆ ಲಕ್ಷ್ಮಿ ಐಯ್ಯಂಗಾರ್ ಅವರು ಅರ್ಜಿದಾರರ ಸೂಚನೆಯಂತೆ ಇಡೀ ಪ್ರಕ್ರಿಯೆ ನಡೆದಿದೆ ಎಂದರು. ಪ್ರತಿವಾದಿಗಳಿಂದ ವಾದ ಪೂರ್ಣಗೊಂಡಿದ್ದು ಅರ್ಜಿದಾರರ ಪರ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಮತ್ತು ಪ್ರೊ. ರವಿವರ್ಮ ಕುಮಾರ್ ಸೆ.12ರಂದು ವಾದಿಸಲಿದ್ದು, ಸದ್ಯ ವಿಚಾರಣೆ ಕೋರ್ಟ್ ಮುಂದೂಡಿದೆ.