Ad imageAd image

MUDA ಹಗರಣ, ಸಿಎಂ ಸಿದ್ದರಾಮಯ್ಯನವರು ಮಾಡಿರುವ ಕಾನೂನುಬಾಹಿರ ಚಟುವಟಿಕೆ ಕುರಿತು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿ

Bharath Vaibhav
MUDA ಹಗರಣ, ಸಿಎಂ ಸಿದ್ದರಾಮಯ್ಯನವರು ಮಾಡಿರುವ ಕಾನೂನುಬಾಹಿರ ಚಟುವಟಿಕೆ ಕುರಿತು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿ
WhatsApp Group Join Now
Telegram Group Join Now

ಬೆಳಗಾವಿ:- ನಗರದ ಸರ್ಕಿಟ್ ಹೌಸ್ ನಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಭಾ.ಜ.ಪಾ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್ MUDA ಹಗರಣ ನಾಲ್ಕು ಸಾವಿರ ಕೋಟಿಗೂ ಅಧಿಕ ಹಣದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ ಬಂದಿದೆ, ಇದಕ್ಕೆ ಮೊದಲು ಅಡಿಪಾಯ ಆಗಿರುವುದೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು. ನಗರಾಭಿವೃದ್ಧಿಯ ಆಕಾರ ಚಕಾರ ತಿಳಿದಿರುವ ತಮ್ಮ ಬಲಗೈ ಬಂಟ ಬೈರತಿ ಸುರೇಶ್ ಅವರಿಗೆ ನಗರಾಭಿವೃದ್ಧಿ ಇಲಾಖೆಯನ್ನು ಕೊಡಿಸಿ, ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮಾಡಲು ಸೂಚನೆ ಕೊಟ್ಟಿರುವುದೇ ಸಿದ್ದರಾಮಯ್ಯನವರು ಎಂದು ಆರೋಪಿಸಿದರು.

ನಂತರ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾತನಾಡಿ ಸಿದ್ದರಾಮಯ್ಯ ಮತ್ತು ಅವರ ಪಟಾಲಂ ಸಾವಿರಾರು ಕೋಟಿಗಳ ಹಲವಾರು ಹಗರಣಗಳನ್ನು ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಹಣವನ್ನು ತಲುಪಿಸುತ್ತಿದ್ದಾರೆ. ಇದೆಲ್ಲದಕ್ಕೂ ತೇಪೆ ಹಾಕುವಂತೆ ಇಬ್ಬರು ಐಎಎಸ್ ಅಧಿಕಾರಿಗಳನ್ನು ತನಿಖಾ ಅಧಿಕಾರಿಗಳನ್ನಾಗಿ ನೇಮಿಸಿ ಜನರ ಕಣ್ಣಿಗೆ ಮಂಕು ಬೂದಿ ಎರಚಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತನಾಡಿ ಸರಿಯಾದ ಸತ್ಯ ಹೊರಗೆ ಬರಬೇಕೆಂದರೆ ಒಬ್ಬ ನಿಸ್ಪಕ್ಷಪಾತವಾಗಿ ಇರುವಂತಹ ಹಿರಿಯ ನ್ಯಾಯಾಧೀಶರ ಅಡಿಯಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು. ಮೊದಲಿಗೆ ಬೈರತಿ ಸುರೇಶ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಗರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಮತ್ತು ಪ್ರಕರಣವನ್ನು ಸಿ.ಬಿ.ಐ ಗೆ ವಹಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೀಪ್ ದೇಶಪಾಂಡೆ, ರಮೇಶ್ ದೇಶಪಾಂಡೆ, ಈರಯ್ಯ ಖೋತ್, ಮುಖಂಡ ಮುರಗೇಂದ್ರಗೌಡ ಪಾಟೀಲ್, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಜಿಲ್ಲಾ ಕೋಶಾಧ್ಯಕ್ಷ ಮಲ್ಲಿಕಾರ್ಜುನ ಮಾದಮ್ಮನವರ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೋಲಕಾರ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಸಂತೋಷ ದೇಶನೂರ, ಸಂಜಯ್ ಕುಮಾರ ನವಲಗುಂದ,ಸಿದ್ದು ಪಾಟೀಲ ಅವರು ಉಪಸ್ಥಿತರಿದ್ದರು.

ವರದಿ:- ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!