Ad imageAd image

ಮುಡಾ ಹಗರಣ : ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ

Bharath Vaibhav
ಮುಡಾ ಹಗರಣ : ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ
WhatsApp Group Join Now
Telegram Group Join Now

ಬೆಂಗಳೂರು : ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿರುವ ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ ಮಾಡಿದೆ.

ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು ಹಗರಣದ ತನಿಖೆಗೆ ಪಟ್ಟು ಹಿಡಿದರು. ಇಂದಿನಿಂದ ಉಭಯ ಸದನಗಳಲ್ಲೂ ಮುಡಾ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಸದನದಲ್ಲೇ ಆಹೋರಾತ್ರಿ ಧರಣಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಈ ಕುರಿತಂತೆ ವಿಧಾನಸೌಧದ ಬಳಿಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಇಂದಿನಿಂದ ರಾತ್ರಿಯಿಡೀ ಧರಣಿ ನಡೆಸಲಿರುವುದಾಗಿ ಘೋಷಣೆ ಮಾಡಿದರು.

ದಲಿತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಸಿಎಂ ಕುಟುಂಬಕ್ಕೆ ನೀಡಿದ ಸೈಟ್ ವಾಪಸ್ ಪಡೆಯಬೇಕು. ಸುಮಾರು ಐದು ಸಾವಿರ ನಿವೇಶನಗಳನ್ನು ಮನಬಂದಂತೆ ಹಂಚಲಾಗಿದೆ. ಅದು ಕೂಡಾ ವಾಪಸ್ ಬರಬೇಕು.

ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!