ಚೆನ್ನೈ: ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಜುಲೈ 28 ರಂದೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗುತ್ತಿದೆ.
ಸದ್ಯದ ಮಾಹಿತಿ ಪ್ರಕಾರ, ಆರಂಭದಲ್ಲಿ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದ ನಟಿಯ ಆರೋಗ್ಯದಲ್ಲಿ ಜಾಸ್ತಿ ತೊಂದರೆ ಕಾಣಿಸಿಕೊಂಡ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ವೈದ್ಯಕೀಯ ಪರೀಕ್ಷೆಗಳನ್ನ ವೈದ್ಯರು ಮಾಡಿದ ನಂತರ, ಅವರಿಗೆ ಡೆಂಗ್ಯೂ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಇನ್ನು ತಮಿಳು ಮಾಧ್ಯಮಗಳ ವರದಿಯ ಪ್ರಕಾರ, ರಾಧಿಕಾ ಅವರ ಆರೋಗ್ಯ ಪರಿಸ್ಥಿತಿಯನ್ನ ವೈದ್ಯರು ಗಂಭೀರವಾಗಿ ಪರಿಗಣಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ, ವೈದ್ಯರು ಆಗಸ್ಟ್ 5ರ ತನಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.
ಸದ್ಯದ ಮಾಹಿತಿ ಪ್ರಕಾರ, ಆರಂಭದಲ್ಲಿ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದ ನಟಿಯ ಆರೋಗ್ಯದಲ್ಲಿ ಜಾಸ್ತಿ ತೊಂದರೆ ಕಾಣಿಸಿಕೊಂಡ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ವೈದ್ಯಕೀಯ ಪರೀಕ್ಷೆಗಳನ್ನ ವೈದ್ಯರು ಮಾಡಿದ ನಂತರ, ಅವರಿಗೆ ಡೆಂಗ್ಯೂ ಸೋಂಕು ತಗುಲಿರುವುದು ಪತ್ತೆಯಾಗಿದೆ.
ಇನ್ನು ತಮಿಳು ಮಾಧ್ಯಮಗಳ ವರದಿಯ ಪ್ರಕಾರ, ರಾಧಿಕಾ ಅವರ ಆರೋಗ್ಯ ಪರಿಸ್ಥಿತಿಯನ್ನ ವೈದ್ಯರು ಗಂಭೀರವಾಗಿ ಪರಿಗಣಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಅಲ್ಲದೇ, ವೈದ್ಯರು ಆಗಸ್ಟ್ 5ರ ತನಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.