ಮುಂಬೈ: ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇಂದು ಸಾಯಂಕಾಲ ಇಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 56 ನೇ ಲೀಗ್ ಪಂದ್ಯದಲ್ಲಿ ಪರಸ್ಪರ ಸೆಣಸಾಡಲಿವೆ.
ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ಸಾಯಂಕಾಲ 7:30 ಕ್ಕೆ ನಡೆಯಲಿದ್ದು, ಮುಂಬೈ ಇಂಡಿಯನ್ಸ್ ತಂಡ ಪಂದ್ಯದಿಂದ ಪಂದ್ಯಕ್ಕೆ ಬಲಿಷ್ಠ ತಂಡವಾಗಿ ಹೊರಹೊಮ್ಮುತ್ತಿದ್ದು, 11 ಪಂದ್ಯಗಳಿಂದ 14 ಅಂಕಗಳಿಸಿ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕುಳಿತಿದೆ. ಇನ್ನೊಂದೆಡೆ 10 ಪಂದ್ಯಗಳಿಂದ 14 ಗಳಿಸಿರುವ ಗುಜರಾತ್ ಟೈಟನ್ಸ್ ತಂಡ ನಾಲ್ಕನೇ ಸ್ಥಾನದಲ್ಲಿದೆ.




