Join The Telegram | Join The WhatsApp |
ರಾಮನಗರ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೇ ಮಾಡುತ್ತೇನೆ. ಈ ಬಾರಿ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ . ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಹಿತದೃಷ್ಟಿಯಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಬಿಜೆಪಿ ಒಂದೇ ಒಂದು ಹಿಂದೂ ಕಾರ್ಯಕರ್ತರ ರೌಡಿ ಶೀಟರ್ ರದ್ದು ಮಾಡಲಾಗಿಲ್ಲ. ಹಿಂದೆ ಕಾಂಗ್ರೆಸ್ ನವರು ರೌಡಿ ಶೀಟರ್ ಗೆ ಹೆಸರು ಸೇರಿಸಿದ್ರು. ಒಂದು ಗೋರಕ್ಷಣೆ ಮಾಡಿದವ್ರನ್ನೂ ರೌಡಿ ಶೀಟರ್ ಅಂದ್ರು ಎಂದು ವಾಗ್ದಾಳಿ ನಡೆಸಿದರು.
ಹಿಂದುತ್ವಕ್ಕೆ ನ್ಯಾಯ ಕೊಡಿಸಲು ನಾನು ಸ್ವತಂತ್ರವಾಗಿ ನಿಲ್ಲುವುದು ಖಚಿತ. ಎಲ್ಲಿ ಸ್ಪರ್ಧೆ ಮಾಡಬೇಕು ಎಂದು ನಿರ್ಧರಿಸಬೇಕು. 5 ಕ್ಷೇತ್ರದಲ್ಲಿ ಸರ್ವೆ ನಡೆಯುತ್ತಿದೆ. ಡಿಸೆಂಬರ್ ಎರಡನೇ ವಾರದಲ್ಲಿ ಇದನ್ನ ಸ್ಪಷ್ಟಪಡಿಸುತ್ತೇನೆ ಎಂದರು
Join The Telegram | Join The WhatsApp |