ಬೆಂಗಳೂರು: ವಿಜಯ ನಗರ ಸಾಮ್ರಾಜ್ಯದ ಆಡಳಿತದಿಂದ ಪ್ರಭಾವಿತರಾಗಿದ್ದ ನಾಡ ಪ್ರಭು ಆಡಳಿತವು ಇಂದಿಗೂ ಮಾದರಿ ಎಂದು ಜೆಡಿಎಸ್ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ ಹೇಳಿದರು.

ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿಯ ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಕೆ.ಎನ್.ಮಲ್ಲೇಶ್ ಅವರ ನೇತೃತ್ವದಲ್ಲಿ ಸಂಘದ ೨ನೇ ವರ್ಷದ ವಾರ್ಷಿಕೋತ್ಸವ, ನಾಡ ಪ್ರಭು ಕೆಂಪೆಗೌಡರ ೫೧೬ನೇ ಜಯಂತಿ ಮತ್ತು ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರವನ್ನು ಅಂದ್ರಹಳ್ಳಿಯ ಎ ಜಿ ಎನ್ ಕನ್ವೆನ್ಷನ್ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸಿ ನಾಡ ದೊರೆ ಕೆಂಪೆಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಉದ್ಘಾಟಿಸಿ ಮಾತನಾಡಿದರು.
ಸಂಘದ ಅಧ್ಯಕ್ಷ ಕೆ.ಎನ್.ಮಲ್ಲೇಶ್ ಸರ್ವರಿಗೂ ಸ್ವಾಗತಿಸಿದರು. ಮಾಜಿ ಸಚಿವ ಹಾಲಿ ಶಾಸಕ ಎಸ್ ಟಿ ಸೋಮಶೇಖರ್ ಆಗಮಿಸಿ ಕೆಂಪೇಗೌಡರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.
ಸಮಾಜ ಸೇವಕ ಹಾಗೂ ಪ್ರಭಾವಿ ಮುಖಂಡ ಮಂಡ್ಯ ಮಲ್ಲೇಶ್ ಅವರು ಮಾತನಾಡಿ ಕೆಂಪೇಗೌಡರು ಅಂದಿನ ಕಾಲದಲ್ಲಿಯೇ ನೀರಿನ ಹಾಗೂ ಮಣ್ಣಿನ ಮಹತ್ವ ತಿಳಿದಿದ್ದರು. ವೈಜ್ಞಾನಿಕವಾಗಿ ಅನೇಕ ಕೆರೆ- ಕಟ್ಟೆಗಳನ್ನು ನಿರ್ಮಿಸಿದ ಕೀರ್ತಿ ನಾಡ ಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ಸಂಘದ ಅಧ್ಯಕ್ಷ ಕೆ.ಎನ್.ಮಲ್ಲೇಶ್ ಮತ್ತು ಪದಾಧಿಕಾರಿಗಳು ಸೇರಿದಂತೆ ಮಂಡ್ಯ ಮಲ್ಲೇಶ್ ಅವರಿಗೆ ಶಾಲು ಹೊದಿಸಿ ಮೈಸೂರು ಪೆಟಾ ಧರಿಸಿ ಫಲಪುಷ್ಪದೊಂದಿಗೆ ಗೌರವಿಸಿದರು.
ಈ ಸಂದರ್ಭದಲ್ಲಿ ದೊಡ್ಡ ಬಿದರಿಕಲ್ಲು ವಾರ್ಡಿನ ಕಾಂಗ್ರೆಸ್ ಅಧ್ಯಕ್ಷ ಲಿಖಿತ್ ಗೌಡ್ರು, ಮಾಜಿ ಅಧ್ಯಕ್ಷ ವಿ. ನಾಗರಾಜ್, ಶ್ರೀನಿವಾಸ್, ಪ್ರಸಾದ್, ಅವಿನಾಶ್ ಮಾಸ್ತಿ ಬಂಟಿ, ಅರುಣ್ ಬೈಲಪ್ಪ, ಅಂಬಿ ಮಲ್ಲೇಶ್,ಗಂಗಣ್ಣ, ರಾಮಸ್ವಾಮಿ, ಮಂಜುನಾಥ್, ಶ್ರೀನಿವಾಸ್, ರಂಗಸ್ವಾಮಿ,ಸೇರಿದಂತೆ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಸಮಸ್ತ ನಾಗರಿಕ ಬಂಧು ಭಗನಿಯರು ಮುಂತಾದವರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್




