ರಾಯಚೂರು : ನಾಳೆ ಬೆಳಗ್ಗೆ 10ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿ ಜಿಂದಾಲ್ ಏರ್‌ಸ್ಟ್ರಿಪ್ ಮಾರ್ಗವಾಗಿ ಹೊರಟು ಬೆಳಗ್ಗೆ 11.40ಕ್ಕೆ ರಾಯಚೂರು ನಗರದಲ್ಲಿನ ಕೃಷಿ ವಿವಿಯ ಹೆಲಿಪ್ಯಾಡ್‌ಗೆ ಆಗಮಿಸುವರು. ಬಳಿಕ ಜಿಲ್ಲಾ ಕ್ರೀಡಾಂಗಣದಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ದಿನ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಮ್ಮಿಕೊಂಡಿರುವ ಸಂವಿಧಾನ ಬಚಾವೋ ಅಭಿಯಾನದಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ
ಬಳಿಕ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ, ಸಭೆ ನಡೆಸುವರು. ಸಂಜೆ 4 ಗಂಟೆಗೆ ರಾಯಚೂರು ಕೃಷಿ ವಿವಿಯ ಹೆಲಿಪ್ಯಾಡ್‌ನಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸುವರು.
ವರದಿ : ಗಾರಲ ದಿನ್ನಿ ವೀರನ ಗೌಡ




