Join The Telegram | Join The WhatsApp |
ಸವದತ್ತಿ: ತಾಲ್ಲೂಕು ಪಂಚಾಯತ್ ಕಾರ್ಯಾಲಯದ ಆವರಣದಲ್ಲಿ ಗುರುವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಐಇಸಿ ಚಟುವಟಿಕೆಯಡಿ ರೋಜಗಾರ್ ವಾಹಿನಿ ಜಾಗೃತಿ ರಥಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶವಂತಕುಮಾರ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶವಂತಕುಮಾರ ಮಾತನಾಡಿ, ಸವದತ್ತಿ ತಾಲ್ಲೂಕಿನ 44 ಗ್ರಾಪಂಗಳ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯ ಕುರಿತು ವ್ಯಾಪಕ ಪ್ರಚಾರ ಮಾಡುವ ಉದ್ದೇಶದಿಂದ ರೋಜಗಾರ್ ವಾಹಿನಿ ಜಾಗೃತಿ ರಥಕ್ಕೆ ಚಾಲನೆ ನೀಡಲಾಗಿದ್ದು, ಈ ವಾಹಿನಿ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಮನರೇಗಾ ಯೋಜನೆಯ ಬಗ್ಗೆ ಪ್ರಚಾರ ಮಾಡಲಿದೆ ಎಂದು ತಿಳಿಸಿದರು.
ಬಳಿಕ ಸಹಾಯಕ ನಿರ್ದೇಶಕರಾದ (ಗ್ರಾಉ) ಆರ್ ಬಿ ರಕ್ಕಸಗಿ ಅವರು ಮಾತನಾಡಿ, ಮನರೇಗಾ ಯೋಜನೆಯ ಬಗ್ಗೆ ಗ್ರಾಮೀಣ ಜನರಿಗೆ ಮಾಹಿತಿಯನ್ನು ನೀಡಲು ರೋಜಗಾರ್ ವಾಹಿನಿ ಜಾಗೃತ ರಥದ ಮೂಲಕ ಪ್ರಚಾರ ಮಾಡಲಾಗುತ್ತಿದ್ದು, ಇದರ ಪ್ರಯೋಜನೆಯನ್ನು ಗ್ರಾಮೀಣ ಜನರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂರ್ಭದಲ್ಲಿ ಸಹಾಯಕ ನಿರ್ದೇಶಕರಾದ (ಪಂ.ರಾ) ಆರ್ ಎ ಪಾಟೀಲ, ತಾಪಂ ವ್ಯವಸ್ಥಾಪಕಾರದ ಜಿ.ಎಸ್. ಬಡೆಮ್ಮಿ, ವಿಷಯ ನಿರ್ವಾಹಕರಾದ ಮಲ್ಲಿಕಾರ್ಜುನ ಕಂಬಿ, ಟಿಎಂಐಎಸ್ ಸಂಯೋಜಕರಾದ ನಾಗರಾಜ ಬೆಹರೆ, ಐಇಸಿ ಸಂಯೋಜಕರಾದ ಮಲೀಕಜಾನ ಮೋಮಿನ, ತಾಂತ್ರಿಕ ಸಹಾಯಕರು, ಬಿಎಫ್ ಟಿ ಮತ್ತು ತಾಪಂ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು
Join The Telegram | Join The WhatsApp |