ಸಿರುಗುಪ್ಪ : ನಗರದ ಪ್ರೌಢಶಾಲೆ ಆವರಣದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮಕ್ಕೆ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ತಮ್ಮನಗೌಡ ಪಾಟೀಲ್ ಅವರು ಚಾಲನೆ ನೀಡಿದರು.
ವಿಜ್ಞಾನ ಶಿಕ್ಷಕರಾದ ಪವನ್ ಕುಮಾರ್ ಮಾತನಾಡಿ ಸೋಡಿಯಂ ಹೈಡ್ರಾಕ್ಸೈಡ್ ದ್ರಾವಣವನ್ನು ಪ್ರಯೋಗ ಮಾಡಿದರು.
6ನೇ ವಿಭಾಗದ ಕ್ಷೇತ್ರ ಸಂಪನ್ಮೂಲ ಅಧಿಕಾರಿಯಾದ ಮಾರುತಿ ಅವರು ಮಾತನಾಡಿ ವಿದ್ಯಾರ್ಥಿಗಳು ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು.
ತರ್ಕಕ್ಕೆ ಸಂಬಂಧಿಸಿದ ವಿಚಾರಗಳನ್ನು ಪ್ರಶ್ನಿಸುವುದರ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕು.
ವಿದ್ಯಾರ್ಥಿಗಳು ವೈಜ್ಞಾನಿಕ ವಿಚಾರಗಳತ್ತ ಆಸಕ್ತಿ ಬೆಳೆಸಿಕೊಳ್ಳುವುದರ ಜೊತೆಯಲ್ಲಿ ವಿಜ್ಞಾನ ಪ್ರಯೋಗಾತ್ಮಕ ಚಿಂತನೆಯನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗಿ ಹೊರಹೊಮ್ಮಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಇದೇ ವೇಳೆ ಶಾಲೆಯ ಮುಖ್ಯ ಉಪಾಧ್ಯಾಯರಾದ. ಹೆಚ್.ದೊಡ್ಡಬಸಪ್ಪ, ಎಸ್.ಡಿ.ಎಮ್.ಸಿ. ಸದಸ್ಯ ನಾಗರಾಜ್, ಶಿಕ್ಷಕರಾದ ಶಿವದಾಸ್,ಮಾಣಿಕ್ಯಮ್ಮ, ಸವಿತಾ, ಜ್ಯೋತಿ, ನೇತ್ರಾ, ಪಾರ್ವತಿ,ಉಷಾ, ಶೈಲಜ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ಶ್ರೀನಿವಾಸ ನಾಯ್ಕ




