Ad imageAd image

ವಾರಕ್ಕೆ 5 ದಿನ ಕೆಲಸಕ್ಕಾಗಿ ಇಂದು ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ

Bharath Vaibhav
ವಾರಕ್ಕೆ 5 ದಿನ ಕೆಲಸಕ್ಕಾಗಿ ಇಂದು ರಾಷ್ಟ್ರವ್ಯಾಪಿ ಬ್ಯಾಂಕ್ ನೌಕರರ ಮುಷ್ಕರ
WhatsApp Group Join Now
Telegram Group Join Now

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಎದುರಿಗೆ ಒತ್ತಾಯಿಸಿ ಜನವರಿ 27ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಷೇರುಪೇಟೆ, ವಿದೇಶಿ ವಿನಿಮಯ ವ್ಯವಹಾರಗಳು ವಾರದಲ್ಲಿ ಐದು ದಿನ ನಡೆಯುತ್ತದೆ. ಹೀಗಾಗಿ ಬ್ಯಾಂಕ್ ಗಳಿಗೆ 5 ಕೆಲಸದ ದಿನಗಳು ಇರಬೇಕು ಎನ್ನುವ ಬೇಡಿಕೆ ಮೊದಲಿನಿಂದಲೂ ಇದೆ.

ಐದು ದಿನದ ಕೆಲಸ ದಿನಗಳನ್ನು ಜಾರಿಗೆ ತರುವುದಾಗಿ ಕೇಂದ್ರ ಸರ್ಕಾರ 2015ರಲ್ಲಿ ಭರವಸೆ ನೀಡಿದ್ದು, ಮೊದಲ ಹಂತದಲ್ಲಿ ಪ್ರತಿ ತಿಂಗಳ 2ನೇ, 4ನೇ ಶನಿವಾರ ರಜೆ ಎಂದು ಘೋಷಿಸಲಾಗಿತ್ತು.

ಉಳಿದ ಶನಿವಾರಗಳಂದು ಬ್ಯಾಂಕ್ ಗಳು ಕಾರ್ಯನಿರ್ವಹಿಸಬೇಕಿದೆ. ಹೀಗಾಗಿ ವಾರಕ್ಕೆ ಐದು ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಮುಷ್ಕರ ಕೈಗೊಳ್ಳಲಾಗಿದೆ.

ಮುಷ್ಕರದ ಪರಿಣಾಮ:

ಠೇವಣಿ, ಹಣ ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್ ಸೇರಿದಂತೆ ಬ್ಯಾಂಕಿಂಗ್ ಸೇವೆಗಳು ಅಡಚಣೆಗೆ ಒಳಗಾಗಲಿವೆ.ಎಟಿಎಂಗಳಲ್ಲಿ ನಗದು ಲಭ್ಯತೆಗೆ ಸಮಸ್ಯೆ ಉಂಟಾಗಬಹುದು.

ಯುಪಿಐ ಹಾಗೂ ಇಂಟರ್‌ನೆಟ್‌ ಬ್ಯಾಂಕಿಂಗ್ ಸೇರಿದಂತೆ ಡಿಜಿಟಲ್‌ ಮಾಧ್ಯಮಗಳ ಮೂಲಕ ಲಭ್ಯವಿರುವ ಬ್ಯಾಂಕಿಂಗ್ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!