ಚಾಮರಾಜನಗರ :- ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನವರಾತ್ರಿ ಉತ್ಸವ ಆರಂಭಗೊಂಡಿದೆ.ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನವರಾತ್ರಿ ಉತ್ಸವ ಆರಂಭವಾಗಿದ್ದು, ಅಲಂಕೃತ ಉಯ್ಯಾಲೆಯಲ್ಲಿ ಉತ್ಸವ ಮೂರ್ತಿಯನ್ನು ವಿಶೇಷ ಮಂತ್ರಘೋಷದೊಂದಿಗೆ ಆರಾಧಿಸಲಾಯಿತು.
ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಅಭಿವೃದ್ದಿ ಪ್ರಾಧಿಕಾರವು ಆಯೋಜಿಸಿದ್ದ ನವರಾತ್ರಿ ಆಚರಣೆಯಲ್ಲಿ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಸಾಲೂರು ಮಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿ ಸಾರಥ್ಯದಲ್ಲಿ ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಗಳು ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.
ವರದಿ :ಸ್ವಾಮಿ ಬಳೇಪೇಟೆ