ಹರಿಯಾಣದ ನೂತನ ಸಿಎಂ ಆಗಿ ನಯಾಬ್ ಸಿಂಘ್ ಸೈನಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಂಡೀ ಘಡದ ಶಾಲಿಮರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ರು.
ಪಂಚಕುಲದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಯಾಬ್ ಸಿಂಗ್ ಸೈನಿ ಹೆಸರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅದರಂತೆ ಇಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
90 ಕ್ಷೇತ್ರಗಳ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48, ಕಾಂಗ್ರೆಸ್ 37 ಸ್ಥಾನಗಳಲ್ಲಿ ಜಯ ಗಳಿಸಿತ್ತು. ಸೈನಿ ಜೊತೆಗೆ ಸಂಪುಟ ಸದಸ್ಯರು ಕೂಡ ಪ್ರಮಾಣ ವಚನ ಸ್ವೀಕರಿಸಿದರು.