Ad imageAd image

ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ವಜಾ 

Bharath Vaibhav
ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ವಜಾ 
WhatsApp Group Join Now
Telegram Group Join Now

ಬೆಂಗಳೂರು: ದಾವಣಗೆರೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬೆಳವಣಿಗೆಯ ಬೆನ್ನಲ್ಲೇ ನಜೀರ್ ಅವರ ನಿವಾಸದ ಬಳಿ ಬೆಂಬಲಿಗರ ಆಕ್ರೋಶ ಹಾಗೂ ಹೈಡ್ರಾಮಾ ನಡೆದಿದ್ದು, ರಾಜಕೀಯ ಪಡಸಾಲೆಯಲ್ಲಿ ತೀವ್ರ ಚರ್ಚೆಗೆ ನಾಂದಿ ಹಾಡಿದೆ.ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡಿದ ಆರೋಪ ಹೊತ್ತಿರುವ ನಜೀರ್‌ಗೆ ಈ ಮೂಲಕ ಸರ್ಕಾರ ದೊಡ್ಡ ಶಾಕ್ ನೀಡಿದೆ.

ದಾವಣಗೆರೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಜೀರ್ ಅಹಮದ್ ಅವರನ್ನು ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!