Ad imageAd image

ನೇಹಾ ಹತ್ಯೆ ಪ್ರಕರಣ : ದುಷ್ಟ ಫಯಾಜ್ ಸಿಐಡಿ ಅಧಿಕಾರಿಗಳ ವಶಕ್ಕೆ

Bharath Vaibhav
WhatsApp Group Join Now
Telegram Group Join Now

ಧಾರವಾಡ : ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಸಂಬಂಧ ಆರೋಪಿ ಫಯಾಜ್ ನನ್ನು ಸಿಐಡಿ ಅಧಿಕಾರಿಗಳ ತಂಡ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಿದೆ.

ಧಾರವಾಡದ ಒಂದನೇ ಜೆಎಂಎಫ್ ಸಿ ಕೋರ್ಟ್ ಇಂದು ನೇಹಾ ಹತ್ಯೆ ಪ್ರಕರಣದ ಆರೋಪಿಯನ್ನು ಆರು ದಿನಗಳ ಸಿಐಡಿಗೆ ನೀಡಿ ಆದೇಶ ಹೋರಡಿಸಿದ್ದು, ಈ ಹಿನ್ನೆಲೆಯಲ್ಲಿ ಧಾರವಾಡದ ಕಾರಾಗೃಹದಲ್ಲಿ ಆರೋಪಿ ಫಯಾಜ್ ನನ್ನು ಸಿಐಡಿ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿದೆ.

ಈಗಾಗಲೇ ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಕೋರ್ಟ್ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗೆ ಸಿಐಡಿ ಅಧಿಕಾರಿಗಳ ತಂಡ ಫಯಾಜ್ ನನ್ನು ವಶಕ್ಕೆ ಪಡೆದುಕೊಂಡಿದೆ.

 

WhatsApp Group Join Now
Telegram Group Join Now
Share This Article
error: Content is protected !!