ಹುಬ್ಬಳ್ಳಿ: ತನಗೂ ಜಾಮೀನು ನೀಡುವಂತೆ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಕೋರ್ಟ್ ಮೊರೆ ಹೋಗಿದ್ದಾನೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ಗೆ ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ಜಾಮೀನು ನೀಡಿ ಎಂದು ಕಿಚಕ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾನೆ.
ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ನಾಳೆ ಜಾಮೀನು ಅರ್ಜಿಯ ಆದೇಶ ಹೊರಬೀಳಲಿದೆ.
ಈ ಕುರಿತು ನೇಹಾ ತಂದೆ ಬೇಸರ ವ್ಯಕ್ತಪಡಿಸಿದ್ದಾರೆ. ನಟ ದರ್ಶನ್ ನಟನೆ, ಒಳ್ಳೆಯ ಕೆಲಸಗಳಿಂದ ಜನರಿಗೆ ಮಾದರಿಯಾಗಬೇಕಿತ್ತು.
ಆದರೆ ಕೊಲೆ ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಮಾದರಿಯಾಗಿದ್ದು, ನಿಜಕ್ಕೂ ನೋವಿನ ವಿಷಯ. ನನ್ನ ಮಗಳಿಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿದ್ದಾರೆ.




