Ad imageAd image

ನನ್ನ ವಿರುದ್ಧ ಶತ್ರು ಭೈರವಿ ಯಾಗ ನಡೆಸಲಾಗುತ್ತಿದೆ : ಡಿ.ಕೆ.ಶಿ ಸ್ಫೋಟಕ ಹೇಳಿಕೆ 

Bharath Vaibhav
ನನ್ನ ವಿರುದ್ಧ ಶತ್ರು ಭೈರವಿ ಯಾಗ ನಡೆಸಲಾಗುತ್ತಿದೆ : ಡಿ.ಕೆ.ಶಿ ಸ್ಫೋಟಕ ಹೇಳಿಕೆ 
DKS
WhatsApp Group Join Now
Telegram Group Join Now

ಬೆಂಗಳೂರು: ಕೇರಳದಲ್ಲಿ ನನ್ನ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ. ನನ್ನ ವಿರುದ್ಧ ಶತ್ರ ಭೈರವಿ ಯಾಗ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅಘೋರಿಗಳ ಮೂಲಕ ಈ ಯಾಗ ಮಾಡಿಸುತ್ತಿದ್ದಾರೆ.

ಪಂಚ ಬಲಿ ಕೊಡುತ್ತಿದ್ದಾರೆ. 21 ಮೇಕೆ, 3 ಎಮ್ಮೆ, 21 ಕಪ್ಪು ಕುರಿ, 5 ಹಂದಿಗಳನ್ನು ಬಲಿ ಕೊಡುತ್ತಿದ್ದಾರೆ. ನನ್ನ ಮೇಲೆ ದೊಡ್ಡ ಪ್ರಯೋಗ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಯಾಗ ನಡೆಯುತ್ತಿದೆ. ಯಾವ ಪೂಜೆ, ಯಾರು ಮಾಡುತ್ತಿದ್ದಾರೆ ಎಲ್ಲಾ ಗೊತ್ತಿದೆ. ನನ್ನ, ಸಿಎಂ ಹಾಗೂ ಸರ್ಕಾರದ ವಿರುದ್ಧ ಪೂಜೆ ಮಡುತ್ತಿದ್ದಾರೆ. ಅವರ ಪ್ರಯತ್ನ ನಡೀತಾ ಇದೆ. ನಾವು ನಂಬಿರುವ ದೇವರು ನಮ್ಮನ್ನು ಕಾಪಾಡುತ್ತಾನೆ ಎಂದು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!