ಹರಾರೆ ( ಜಿಂಬಾಬ್ವೆ) ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ನಡೆದ ಐದನೇ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ ನ್ಯೂಜಿಲೆಂಡ್ 7 ವಿಕೆಟ್ ಗಳ ಸುಲಭ ಗೆಲುವು ಪಡೆಯಿತು.
ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 8 ವಿಕೆಟ್ ಗೆ 134 ರನ್ ಗಳನ್ನು ಮಾತ್ರ ಗಳಿಸಿತು. ಇದಕ್ಕೆ ಪ್ರತಿಯಾಗಿ ಬ್ಯಾಟ್ ಮಾಡಿದ ನ್ಯೂಜಿಲೆಂಡ್ 15.5 ಓವರುಗಳಲ್ಲಿ 3 ವಿಕೆಟ್ ಗೆ 135 ರನ್ ಗಳಿಸಿ ಸುಲಭ ಗೆಲುವು ಪಡೆಯಿತು.




