ಬೆಂಗಳೂರು: ಬೆಂಗಳೂರಿನಲ್ಲಿ ನವವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಗಾನವಿ ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಹಾರಾಷ್ಟ್ರದ ನಾಗಪುರದಲ್ಲಿ ಪತಿ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗಪುರದ ಖಾಸಗಿ ಹೋಟೆಲ್ ಕೋಣೆಯಲ್ಲಿ ಸೂರಜ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸೂರಜ್ ತಾಯಿ ಜಯಂತಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಅಸ್ವಸ್ಥ ಜಯಂತಿಯವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶ್ರೀಲಂಕಾಗೆ ಹನಿಮೂನ್ ಗೆ ತೆರಳಿದ್ದ ಸೂರಜ್ ಮತ್ತು ಗಾನವಿ ಬೆಂಗಳೂರಿಗೆ ವಾಪಸ್ ಆಗಿದ್ದರು. ಹನಿಮೂನ್ ಮೊಟಕುಗೊಳಿಸಿ ಅರ್ಧದಲ್ಲಿಯೇ ಬೆಂಗಳೂರಿಗೆ ಬಂದಿದ್ದ ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೊನ್ನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.




