Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

07ನೇ ವೇತನ ಆಯೋಗದ ವರದಿ ಯಥಾವತ್ತು ಜಾರಿ-ಇಳಕಲ್ ನೌಕರರ ಸಂಘ ಹರ್ಷ

Advertisement
ಇಲಕಲ್: ರಾಜ್ಯ ಸರಕಾರಿ ನೌಕರರ ಬಹುದಿನಗಳ ಪ್ರಮುಖ ಬೇಡಿಕೆಗಳಲ್ಲಿ ಒಂದಾದ 07 ನೇ ವೇತನ ಆಯೋಗದ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿ ವಿಧಾನ ಮಂಡಲ ಅಧಿವೇಶನದಲ್ಲಿ ಯಥಾವತ್ತಾಗಿ ಜಾರಿ ಮಾಡಿದ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸದಸ್ಯರ ತೀರ್ಮಾನಕ್ಕೆ ಇಳಕಲ್ ನೌಕರರ ತಾಲೂಕು ಘಟಕ ಹರ್ಷ ವ್ಯಕ್ತಪಡಿಸಿದೆ.

ಈ ಕುರಿತು ಇಳಕಲ್ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಶುರಾಮ ಪಮ್ಮಾರ ಮಾತನಾಡಿ,ಸಂಘದ ನಿರಂತರ ಹೋರಾಟದ ಪ್ರತಿಫಲವಾಗಿ ಹಾಗೂ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರುಗಿದ್ದ ನೌಕರರ ಮಹಾಸಮ್ಮೇಳನದಲ್ಲಿ ಕೊಟ್ಟ ಮಾತಿನಂತೆ 07 ನೇ ವೇತನ ಆಯೋಗದ ವರದಿಗೆ ಘನ ಸರಕಾರವು ಅಸ್ತು ಎಂದಿದೆ.ಇದರಿಂದ ರಾಜ್ಯದ 6 ಲಕ್ಷ ಸರಕಾರಿ ನೌಕರರು,ನಿವೃತ್ತ ನೌಕರರು,ನಿಗಮ ಮಂಡಳಿ,ಸ್ಥಳೀಯ ಸಂಸ್ಥೆ ನೌಕರರು ಸೇರಿದಂತೆ 10 ಲಕ್ಷಕ್ಕೂ ಅಧಿಕ ನೌಕರರ ವೇತನ ಹೆಚ್ಚಳ ಮಾಡಿದ ಮಾನ್ಯ ಮುಖ್ಯಮಂತ್ರಿಗಳಾದ
ಸಿದ್ದರಾಮಯ್ಯ ರವರಿಗೆ,ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ ರವರಿಗೆ,ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಹಾಗೂ ಕಳೆದ ಜನೇವರಿ ಹಾಗೂ ಮೊನ್ನೆ ತಾಲೂಕಿನಲ್ಲಿ ಹಕ್ಕೊತ್ತಾಯ ಮನವಿ ಸ್ವೀಕರಿಸಿ, ಮುಖ್ಯಮಂತ್ರಿಗಳಿಗೆ ನಮ್ಮ ಪರವಾಗಿ ಒತ್ತಾಯ ಮಾಡಿದ ಹುನಗುಂದ ಕ್ಷೇತ್ರದ ಮಾನ್ಯ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ರವರಿಗೆ,ಸಂಪುಟದ ಎಲ್ಲಾ ಸಚಿವರುಗಳಿಗೆ,ರಾಜ್ಯದ ಸರ್ವ ಶಾಸಕರುಗಳಿಗೆ,ಉನ್ನತ ಮಟ್ಟದ ಅಧಿಕಾರಿಗಳಿಗೆ ಹಾಗೂ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿ ಹಾಗೂ ಜಿಲ್ಲಾಧ್ಯಕ್ಷರಾದ ಎಂ ಬಿ ಬಳ್ಳಾರಿ ರವರಿಗೆ ಇಳಕಲ್ ತಾಲೂಕಿನ ಸಮಸ್ತ ನೌಕರರು,ವೃಂದ ಸಂಘದ ಪದಾಧಿಕಾರಿಗಳು,ನೌಕರರ ಸಂಘದ ಪದಾಧಿಕಾರಿಗಳ ಪರವಾಗಿ ಧನ್ಯವಾದಗಳು ತಿಳಿಸಿದ್ದಾರೆ.

ಹಾಗೂ ಪ್ರಮುಖ ಬೇಡಿಕೆಯಾದ ಎನ್ ಪಿ ಎಸ್ ರದ್ದುಪಡಿಸಿ,ಓಪಿಎಸ್ ಜಾರಿಗೊಳಿಸಲು ಹಾಗೂ ನಗದು ರಹಿತ ಚಿಕಿತ್ಸೆ ಯೋಜನೆ ಶೀಘ್ರ ಜಾರಿಗೊಳಿಸಲು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲದಾರರಾದ ಈಶ್ವರ ಗಡ್ಡಿ,ಕಾರ್ಯದರ್ಶಿ ಗುಂಡಪ್ಪ ಕುರಿ,ಖಜಾಂಚಿ ಶರಣು ಕೊಣ್ಣೂರ,ಗೌರವಾಧ್ಯಕ್ಷ ಎಸ್ ಎನ್ ಗಡೇದ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ದಾವಲ್ ಶೇಡಂ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ