Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಳ್ಳು ಹೇಳಿ ನಂಬಿಸಿ ಗೃಹಿಣಿಗೆ 1 ಕೋಟಿ ರೂ. ವಂಚನೆ

Advertisement

ಬೆಂಗಳೂರು: ಮನೆಗೆ ಶಾಂತಿ ಪೂಜೆಗೆ ಬಂದ ವ್ಯಕ್ತಿಯೊಬ್ಬ ತಾನು ಚಿನ್ನದ ವ್ಯವಹಾರ ಮಾಡುವುದಾಗಿ ನಂಬಿಸಿ ಮನೆಯ ಯಜಮಾನಿಯಿಂದ 1 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಮರಾವತಿ ಎಂಬ ಗೃಹಿಣಿಗೆ ಚಿನ್ನದ ಬಿಸ್ಕೆಟ್‌ಗಳನ್ನು ತೋರಿಸಿ ವಂಚಿಸಿದ ಆರೋಪದಡಿ ಗೋಪಾಲಕೃಷ್ಣ, ರಾಕೇಶ್ ರೆಡ್ಡಿ, ರೂಪಾ ಹಾಗೂ ಯಶವಂತ್ ಕುಮಾರ್ ಎಂಬವರ ವಿರುದ್ಧ ಸಿಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ. ಕೆ.ಆರ್.ಪುರಂನ ಕಿತ್ತಗನೂರು ಮುಖ್ಯರಸ್ತೆಯ ಸಾಯಿ ಲೇಔಟ್‌ನ ನಿವಾಸಿ ಅಮರಾವತಿ ಹಣ ಕಳೆದುಕೊಂಡಿದ್ದಾರೆ.


ವಂಚನೆ ಹೇಗೆ?: ಕಳೆದ ವರ್ಷ ಅಮರಾವತಿ ತಮ್ಮ ಮನೆಯಲ್ಲಿ ಶಾಂತಿ ಪೂಜೆಗಾಗಿ ಗೋಪಾಲಕೃಷ್ಣನನ್ನು ಕರೆಸಿದ್ದರು. ಪೂಜೆ ಮುಗಿದ ಎರಡು ದಿನಗಳ ಬಳಿಕ ರಾಕೇಶ್ ರೆಡ್ಡಿಯೊಂದಿಗೆ ಅಮರಾವತಿಯವರ ಮನೆಗೆ ಬಂದಿದ್ದ ಗೋಪಾಲಕೃಷ್ಣ, ''ನಮ್ಮ ಬಳಿ 300 ಕೋಟಿ ಅಮೆರಿಕನ್ ಡಾಲರ್ ಇದೆ. ಅದರಿಂದ ನಮಗೆ ಕೆ.ಜಿ ತೂಕದಲ್ಲಿ ಚಿನ್ನ ದೊರೆಯುತ್ತದೆ. ಪ್ರತಿ ಗ್ರಾಂ ಚಿನ್ನವನ್ನು 4 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತೇವೆ'' ಎಂದು ನಂಬಿಸಿದ್ದರು.


ಅಮರಾವತಿ ಮತ್ತವರ ಮಗನ ಸಮ್ಮುಖದಲ್ಲಿಯೇ ಗೋಲ್ಡ್ ಬಿಸ್ಕೆಟ್‌ ಅನ್ನು ಜ್ಯುವೆಲರಿ ಅಂಗಡಿಗೆ ಮಾರಾಟ ಮಾಡಿ ಹಣ ಪಡೆಯುವ ಮೂಲಕ ನಂಬಿಕೆ ಗಳಿಸಿದ್ದರು. ಬಳಿಕ ಚಿನ್ನ ನೀಡುವುದಾಗಿ ಅಮರಾವತಿ ಮತ್ತು ಅವರ ಪರಿಚಿತರ ಕಡೆಯಿಂದ 1 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದುಕೊಂಡಿದ್ದರು. ಹಣ ಪಡೆದ ಬಳಿಕವೂ ಚಿನ್ನ ನೀಡದಿದ್ದಾಗ ಪ್ರಶ್ನಿಸಿದ್ದು, ''ನಮ್ಮ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ಬಳಿ ಸಿಲುಕಿ ಹಾಕಿಕೊಂಡಿದೆ" ಎಂದು ಸಬೂಬು ಹೇಳಿದ್ದರು.












ಸಾಕಷ್ಟು ದಿನ ಕಳೆದರೂ ಚಿನ್ನವನ್ನೂ ನೀಡದೆ, ಹಣವನ್ನೂ ಕೊಡದೆ ವಂಚಿಸಿರುವ ಆರೋಪಿಗಳ ವಿರುದ್ಧ ಸದ್ಯ ಅಮರಾವತಿಯವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.



Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ