LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

1 ಲಕ್ಷ ರೂ. ಲಂಚ ಸ್ವೀಕರಿಸಿದ್ದ ತಹಶೀಲ್ದಾರ್ ಗೆ 4 ವರ್ಷ ಜೈಲು ಶಿಕ್ಷೆ, ತಲಾ 20 ಸಾವಿರ ರೂ. ದಂಡ

Advertisement

ಕಲಬುರಗಿ: ಲಂಚದ ಹಣದೊಂದಿಗೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಅಫಜಲಪುರದ ಮಾಜಿ ತಹಶೀಲ್ದಾರ್‌ ಶಶಿಕಲಾ ಪಾದಗಟ್ಟಿ ಹಾಗೂ ಅವರಿಗೆ ಸಹಕರಿಸಿದ್ದ ಶಿವಾನಂದ ಜಮಖಂಡಿ ಎಂಬುವವರಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷಗಳ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಕಳೆದ 2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಶಿವಲಿಂಗಯ್ಯ ಎಂಬುವವರ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. 

ಈ ಇಲಾಖಾ ತನಿಖೆಯ ಪ್ರಕರಣದಲ್ಲಿ ತಮಗೆ ಸಹಾಯ ಮಾಡುವಂತೆ ಶಿವಲಿಂಗಯ್ಯ ಅವರು ಅಂದಿನ ತಹಶೀಲ್ದಾರ್‌ ಶಶಿಕಲಾ ಅವರನ್ನು ಕೋರಿದ್ದರು.

ಈ ಸಂದರ್ಭದಲ್ಲಿ ಶಶಿಕಲಾ ಅವರು ಪ್ರಕರಣ ಇತ್ಯರ್ಥಪಡಿಸಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಹಣ ನೀಡದಿದ್ದರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ತಹಶೀಲ್ದಾರ್ ಬೇಡಿಕೆಯಿಂದ ಬೇಸತ್ತ ಶಿವಲಿಂಗಯ್ಯ ಅವರು ಈ ಬಗ್ಗೆ ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು.

ತಹಶೀಲ್ದಾರ್ ಸೂಚನೆಯಂತೆ 2017ರ ಆಗಸ್ಟ್ 31ರಂದು ಶಿವಲಿಂಗಯ್ಯ ಅವರು ಶಿವಾನಂದ ಜಮಖಂಡಿ ಎಂಬುವವರಿಗೆ ಲಂಚದ ಹಣ ನೀಡುತ್ತಿದ್ದರು.

ಆ ಹಣವನ್ನು ಪಡೆದು ತಹಶೀಲ್ದಾರ್‌ಗೆ ತಲುಪಿಸುವಾಗ ಲೋಕಾಯುಕ್ತ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ ಇಬ್ಬರನ್ನೂ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದರು.

ನ್ಯಾಯಾಲಯದ ಕಠಿಣ ತೀರ್ಪು

ಅಂದಿನ ಲೋಕಾಯುಕ್ತ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಅವರು ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖಾಧಿಕಾರಿ ಕೃಷ್ಣಪ್ಪ ಕಲ್ಲದೇವರ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್. ಚಾಂದಕವಠೆ ಅವರು ಸರ್ಕಾರದ ಪರವಾಗಿ ಪ್ರಬಲ ವಾದ ಮಂಡಿಸಿದ್ದರು.

ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ.ಎಲ್‌. ಲಕ್ಷ್ಮೀನಾರಾಯಣ ಅವರು ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಈ ಕಠಿಣ ಶಿಕ್ಷೆ ಪ್ರಕಟಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್ಆಗಸ್ಟ್ 13 ರಂದು ಅಧಿವೇಶನ,14 ರಂದು ನೂತನ ಉಪಸಭಾಪತಿಗಳ ಆಯ್ಕೆ : ಡಿ.ಕೆ.ಶಿವಕುಮಾರ್ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ​ಶ್ರೀ ಕ್ಷೇತ್ರ ಪರಕನಹಟ್ಟಿಯಿಂದ ಹುಬ್ಬಳ್ಳಿಗೆ ಪ್ರಥಮ ವರ್ಷದ ಸಿದ್ಧಾರೂಢ ಪಾದಯಾತ್ರೆ: ಭಕ್ತಿಪರವಶತೆಯಿಂದ ಚಾಲನೆಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ  : ಶಾಸಕ ಜಿ.ಹಂಪಯ್ಯ ನಾಯಕ ಸಾಹುಕಾರ