Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

10 ರಾಜ್ಯದ 37 ರಾಜ್ಯಸಭಾ ಸ್ಥಾನಕ್ಕೆ ಚುನಾವಣೆ. ದಿನಾಂಕ ಘೋ‍ಷಣೆ

Advertisement
ನವದೆಹಲಿ : ಕೇಂದ್ರ ಚುನಾವಣಾ ಆಯೋಗ 10 ರಾಜ್ಯದ 37 ರಾಜ್ಯಸಭಾ ಸ್ಥಾನಕ್ಕೆ ಚುನಾವಣೆಯನ್ನು ಘೋ‍ಷಣೆ ಮಾಡಿದೆ. ಮಾರ್ಚ್ 16ರಂದು ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ನಡೆಯಲಿದೆ.ಏಪ್ರಿಲ್ 2026ರಲ್ಲಿ 10 ರಾಜ್ಯಗಳ 37 ರಾಜ್ಯಸಭಾ ಸದಸ್ಯರ ಅವಧಿ ಪೂರ್ಣಗೊಳ್ಳಲಿದೆ.

ತೆರವಾಗುವ ಸ್ಥಾನಗಳಿಗೆ ಚುನಾವಣೆಯನ್ನು ನಡೆಸಲು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.

ಫೆಬ್ರವರಿ 26ರಂದು ರಾಜ್ಯಸಭೆ ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಮಾರ್ಚ್ 5 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾರ್ಚ್ 6ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಮಾರ್ಚ್ 9 ಕೊನೆಯ ದಿನವಾಗಿದೆ.

ಮಾರ್ಚ್ 16ರಂದು ಮತದಾನ ನಡೆಯಲಿದ್ದು, ಅಂದು ಸಂಜೆ 5 ಗಂಟೆಯ ಬಳಿಕ ಮತ ಎಣಿಕೆ ಮಾಡಲಾಗುತ್ತದೆ. ಮಾರ್ಚ್ 20ರಂದು ರಾಜ್ಯಸಭೆ ಚುನಾವಣೆಯ ಸಂಪೂರ್ಣ ಪಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಯಾವ-ಯಾವ ರಾಜ್ಯಗಳು?; ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಹರ್ಯಾಣ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣ ರಾಜ್ಯದ 37 ಸೀಟುಗಳಿಗೆ ಚುನಾವಣೆ ನಡೆಯಲಿದೆ.

ರಾಜ್ಯಸಭೆ ಚುನಾವಣೆ ವೇಳಾಪಟ್ಟಿ 37 ಸೀಟು, 10 ರಾಜ್ಯಗಳು

ಫೆಬ್ರವರಿ 26, ಗುರುವಾರ ಚುನಾವಣಾ ಅಧಿಸೂಚನೆ ಪ್ರಕಟ

ಮಾರ್ಚ್ 5, ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನ

ಮಾರ್ಚ್ 6, ಶುಕ್ರವಾರ ನಾಮಪತ್ರಗಳ ಪರಿಶೀಲನೆ

ಮಾರ್ಚ್ 9, ಸೋಮವಾರ ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ

ಮಾರ್ಚ್ 16, ಸೋಮವಾರ ಮತದಾನ (ಬೆಳಗ್ಗೆ 9 ರಿಂದ ಸಂಜೆ 4)

ಮಾರ್ಚ್ 16 ಸೋಮವಾರ ಸಂಜೆ 5 ಗಂಟೆ ಬಳಿಕ ಮತ ಎಣಿಕೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ