LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಜ್ಯದಲ್ಲಿ 1,07,96,399 ಕೋಟಿ ಮತದಾರರು ಡಿಲೀಟ್ : ವಿ. ಅನ್ಬುಕುಮಾರ್

Advertisement

ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು, ಒಟ್ಟು 1,07,96,399 ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ (ಡಿಲೀಟ್ ಮಾಡಲಾಗಿದೆ) ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷ್ಕರಣೆ ಪ್ರಕ್ರಿಯೆಯ ಸಮಗ್ರ ಅಂಕಿ-ಅಂಶಗಳನ್ನು ಹಂಚಿಕೊಂಡರು.

ಗೈರಾದವರು ಹಾಗೂ ಸ್ಥಳಾಂತರಗೊಂಡವರ ವಿವರ

ಮನೆ-ಮನೆ ಸಮೀಕ್ಷೆ ಹಾಗೂ ಪರಿಶೀಲನೆ ವೇಳೆ ಪತ್ತೆಯಾದ ಅಂಶಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಶಾಶ್ವತವಾಗಿ ಸ್ಥಳಾಂತರಗೊಂಡವರು: ರಾಜ್ಯದಲ್ಲಿ ಒಟ್ಟು 65,45,679 ಮತದಾರರು ಶಾಶ್ವತವಾಗಿ ಬೇರೆಡೆ ಸ್ಥಳಾಂತರಗೊಂಡಿರುವುದು ಕಂಡುಬಂದಿದೆ.

ಗೈರುಹಾಜರಾದವರು: ಪರಿಶೀಲನೆ ವೇಳೆ ಸ್ಥಳದಲ್ಲಿ ಲಭ್ಯವಿಲ್ಲದ ಮತ್ತು ಗೈರಾದ ಮತದಾರರ ಸಂಖ್ಯೆ 15,17,042 ಆಗಿದೆ.

ಗೈರುಹಾಜರಿ, ಶಾಶ್ವತ ಸ್ಥಳಾಂತರ, ಮೃತರು ಹಾಗೂ ನಕಲಿ ಹೆಸರುಗಳು ಸೇರಿದಂತೆ ಒಟ್ಟು 1,07,96,399 ಮತದಾರರ ಹೆಸರುಗಳನ್ನು ಮೊದಲ ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮತದಾರರು ತಮ್ಮ ಹೆಸರು ಮತ್ತು ವಿವರಗಳನ್ನು ಪರಿಶೀಲಿಸಲು CEO Karnataka ವೆಬ್‌ಸೈಟ್ಗೆ ಭೇಟಿ ನೀಡಬಹುದು. ತಿದ್ದುಪಡಿ ಅಥವಾ ಆಕ್ಷೇಪಣೆಗಳಿದ್ದಲ್ಲಿ ಸಕ್ಷಮ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಬಗ್ಗೆ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದಂತ ಅನ್ಬುಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಆಗಸ್ಟ್ 17ರವರೆಗೆ ನಡೆದ 49 ದಿನಗಳ ಮನೆ-ಮನೆ ಸಮೀಕ್ಷೆಯ (SIR) ನಂತರ, ಗೈರುಹಾಜರಿ, ಸ್ಥಳ ಬದಲಾವಣೆ, ನಕಲಿ, ಮೃತ ಹಾಗೂ ಇತರ (ASDDO) ವರ್ಗಗಳಲ್ಲಿ ಗುರುತಿಸಲಾದ ಸುಮಾರು 1.08 ಕೋಟಿ ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ಹೊರಗಿಡಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಹಾಕಿ ಪಂದ್ಯಾವಳಿಯಿಂದ ಭಾರತ ನಿರ್ಗಮನ 3 ದಿನ ಮೊದಲೇ ವಿಧಾನಸಭೆ, ವಿಧಾನಪರಿಷತ್ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಶವಂತಪುರ ಕ್ಷೇತ್ರದಲ್ಲಿ ಗ್ಯಾರಂಟಿ ಯೋಜನೆ ಸಮಿತಿ  ಕಚೇರಿ ಉದ್ಘಾಟನೆ: ಶಾಸಕ ಎಸ್ ಟಿ ಸೋಮಶೇಖರ್ ತೆಕ್ಕಲಕೋಟೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ತರಬೇತಿ ಕಾರ್ಯಾಗಾರವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ,  ಉಪನ್ಯಾಸಕ ಚಂದ್ರಶೇಖರ್ ಅಮಾನತ್ತಿಗೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆಭಿಕ್ಷೆ ಬೇಡುತ್ತಿದ್ದ ಅಜ್ಜಿ ಸಾವು : ಮನೆಯಲ್ಲಿ ಸಿಕ್ಕಿತು ಬರೋಬ್ಬರಿ 30 ಲಕ್ಷ! ರಾಜ್ಯದಲ್ಲಿ 1,07,96,399 ಕೋಟಿ ಮತದಾರರು ಡಿಲೀಟ್ : ವಿ. ಅನ್ಬುಕುಮಾರ್ಹೆತ್ತ ತಂದೆ-ತಾಯಿಯನ್ನೇ ಅತ್ಯಂತ ಬರ್ಬರವಾಗಿ ಕೊಲೆಗೈದ ಮಗಕೊಲಂಬೊ ಟೆಸ್ಟ್ : ಉತ್ತಮ ಸ್ಥಿತಿಯಲ್ಲಿ ಭಾರತವೃಶಬ್ ಪಂತ್ ಇನ್ನೊಂದು ವಿಕ್ರಮ