LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

 ವಾತ್ಸಲ್ಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಉದ್ಘಾಟನೆ

Advertisement
ಬೈಲಹೊಂಗಲ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆನಿಗೊಳ ವಲಯದ ವಕ್ಕುಂದ ಕಾರ್ಯಕ್ಷೇತ್ರದಲ್ಲಿ ಈ ದಿನ ಮಾಶಾಸನ ಫಲಾನುಭವಿಯಾದ ಶ್ರೀಮತಿ ಕಾಶವ್ವ ಬಸಪ್ಪ ನಾಗನೂರು ಇವರಿಗೆ ಧರ್ಮಸ್ಥಳ ಕ್ಷೇತ್ರದಿಂದ ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ಮಂಜೂರಾತಿಯಾದ ನೀರ್ಗತಿಕರಿಗೆ "ವಾತ್ಸಲ್ಯ ಮನೆ ನಿರ್ಮಾಣ" ಮಾಡುವುದುರ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ನಿರ್ಮಲಾ ಕಲ್ಲಿ, ಉದ್ಘಾಟಕರಾಗಿ ಖ್ಯಾತ ಚಲನಚಿತ್ರ ನಟರು ಮತ್ತು ನಿರ್ದೇಶಕರು ಶ್ರೀಯುತ ಸಿ ಕೆ ಮೆಕ್ಕೆದ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ವಿಜಯಲಕ್ಷ್ಮಿ ಅನಿಗೋಳ,ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳಗಾವಿ ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ನಾಯ್ಕ್, ತಾಲೂಕಿನ ಯೋಜನಾಧಿಕಾರಿಗಳಾದ ವಿಜಯ್ ಕುಮಾರ್ ಎಂ,ಅರ್ಚಕರಾದ ಚೆನ್ನಯ್ಯ ಚಿಕ್ಕಮಠ ತಾಲೂಕಿನ ಜ್ಞಾನವಿಕಾಸ ಸಮನ್ವಯ ಅಧಿಕಾರಿ ಶೈಲಾ ಜೆ. ವಲಯದ ಮೇಲ್ವಿಚಾರಕರಾದ ಜಗದೀಶ ಕುಂಬಾರ,ಒಕ್ಕೂಟದ ಅಧ್ಯಕ್ಷರಾದ ಮಲ್ಲವ್ವ ಮತ್ತು ಅನ್ನಪೂರ್ಣ ಇವರ ಸಮ್ಮುಖದಲ್ಲಿ ದೀಪಾ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಾಸ್ತಾವಿಕವಾಗಿ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀ ಸತೀಶ್ ನಾಯ್ಕ್ ಅವರು ಜ್ಞಾನವಿಕಾಸ ಕಾರ್ಯಕ್ರಮ ರೂಪುರೇಷೆ, ಕಾರ್ಯಕ್ರಮದಡಿಯಲ್ಲಿ ಸಿಗುವಂತ ಸೌಲಭ್ಯಗಳ ಬಗ್ಗೆ ತಿಳಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 844 ನಿರ್ಗತಿಕರಿಗೆ ಪ್ರತಿ ತಿಂಗಳು ರೂ.1000 ದಿಂದ 1500/- ರೂ.ವೆರೆಗೆ ಮಾಶಾಸನ ನೀಡುತ್ತಿದ್ದು,ಪ್ರಸ್ತುತ ವರ್ಷ ತೀರ ನಿರ್ಗತಿಕರ ಫಲಾನುಭಗಳನ್ನು ಗುರುತಿಸಿ ಮಕ್ಕಳು ಇಲ್ಲದವರು, ದುಡಿಯಲು ಶಕ್ತಿ ಇಲ್ಲದವರು, ಅವರಿಗೆ ಯಾವುದೇ ರೀತಿಯ ಸಹಾಯ ಸಿಗದೆ ಅವರ ಜೀವನಕ್ಕೆ ಆಧಾರನೇ ಇಲ್ಲದಂತ ಸದಸ್ಯರನ್ನ ಗುರುತಿಸಿ ವಾತ್ಸಲ್ಯ ಕಾರ್ಯಕ್ರಮ ಅಡಿಯಲ್ಲಿ ವಾತ್ಸಲ್ಯ ಮನೆ ನಿರ್ಮಾಣ ಮಾಡುತ್ತಿದ್ದು, ಪ್ರಸ್ತುತ ಆರ್ಥಿಕ ವರ್ಷದಲ್ಲಿ 44 ವಾತ್ಸಲ್ಯ ಮನೆ ರಚನೆ ಹಾಗೂ ಮನೆ ರಿಪೇರಿ ಶೌಚಾಲಯ ರಚನೆ ಮಾಡುವ ಮೂಲಕ ಅವರಿಗೆ ಸುಖ ಜೀವನ ನಡೆಸಲು ಸೂರು ಕಟ್ಟಿ ಕೊಡುವ ಮೂಲಕ ಬದುಕಲು ಉಮ್ಮಸ್ಸು ತುಂಬುವಂತ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ. ಮತ್ತು ಇದಲ್ಲದೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಹಲವಾರು ದೇವಸ್ಥಾನಗಳಿಗೆ ಶಾಲಾ ಕಟ್ಟಡಗಳಿಗೆ ಅನುದಾನಗಳ ನೀಡುವುದು ಉನ್ನತ ಪದವೀಧರ ಶಿಕ್ಷಣ ಮಾಡುವಂತಹ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಜ್ಞಾನದೀಪ ಕಾರ್ಯಕ್ರಮ ಅಡಿಯಲ್ಲಿ ಶಿಕ್ಷಕರ ಒದಗಣೆ ಇನ್ನು ಹತ್ತು ಹಲವಾರು ಕಾರ್ಯಕ್ರಮಗಳನ ನೀಡುವ ಮೂಲಕ ಗ್ರಾಮೀಣ ಪ್ರದೇಶ ಅಭಿವೃದ್ಧಿ ಹೊಂದಲು ಅವಕಾಶ ನೀಡಿರುತ್ತಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮ ಉದ್ಘಾಟಕರಾದ ಸಿ ಕೆ ಮೆಕ್ಕೆದ್ ಅವರು ಸಂಘಟನೆ ಮಾಡುವ ಮೂಲಕ ಧರ್ಮಸ್ಥಳ ಸಂಸ್ಥೆ ಅಪಾರವಾದ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಅಮ್ಮನವರ ನೇತೃತ್ವದಲ್ಲಿ ಹಿಂದುಳಿದ ಬಡ ಹೆಣ್ಣು ಮಕ್ಕಳು ತಂದೆ ತಾಯಿ ನೋಡದ ಮಕ್ಕಳಿರದ ವಯಸ್ಸಾದ ವೃದ್ಧರಿಗೆ ನೀಡುವ ಸೌಲಭ್ಯಗಳನ್ನು ಕರ್ನಾಟಕದ್ಯಾದಂತ ನೀಡುತ್ತಿರುವುದು ಹೆಮ್ಮೆಯ ವಿಷಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದೇ ತೆರನಾಗಿ ಮುಂದಿನ ದಿನಗಳಲ್ಲಿಯು ಸಮಾಜಮುಖಿ ಕಾರ್ಯಗಳನ್ನು ಮಾಡಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ನಿರೂಪಣೆ ಯನ್ನು ಜ್ಞಾನವಿಕಾಸ ಸಮನ್ವಯಧಿಕಾರಿ ಶೈಲಾ ಜೆ,ಸ್ವಾಗತವನ್ನು ವಲಯದ ಮೇಲ್ವಿಚಾರಕರಾದ ಜಗದೀಶ ಕುಂಬಾರ ರವರು ನೆರವೇರಿಸಿದರು ಈ ಸಂದರ್ಭ ಸೇವಾ ಪ್ರತಿನಿಧಿ ಭಾರತಿ ಢವಳೆ ರೇಣುಕಾ ಜಾವೂರೆ ಸಂಘದ ಸದಸ್ಯರು ಉಪಸ್ಥಿತರಿದ್ದರು ಕಾರ್ಯಕ್ರಮ ಯಶಸ್ಸುಗೊಳಿಸಲಾಯಿತು.

ವರದಿ : ದುಂಡಪ್ಪ ಹೂಲಿ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ