Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸಂಗಮ ಸಿರಿ  ಪ್ರಶಸ್ತಿ : ಡಾ.ಸಾದರ, ಡಾ.ಪಟ್ಟಣ ಆಯ್ಕೆ

Advertisement
ಹುಬ್ಬಳ್ಳಿ : ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಈ ವರ್ಷ ಡಾ. ಬಸವರಾಜ ಸಾದರ ಹಾಗೂ ಡಾ. ಶಶಿಕಾಂತ್ ಪಟ್ಟಣ ಅವರು ಆಯ್ಕೆ ಆಗಿದ್ದಾರೆ.

ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕಳೆದ ನಾಲ್ಕು ವರ್ಷಗಳಿಂದ ವಿವಿಧ ಸಾಹಿತ್ಯ ಕ್ಷೇತ್ರದ ಸಾಧಕರನ್ನು ಗುರುತಿಸಿ "ಸಂಗಮ ಸಿರಿ " ರಾಜ್ಯಮಟ್ಟದ ಪ್ರಶಸ್ತಿ ನೀಡುತ್ತ ಬಂದಿದೆ.

ಈ ವರ್ಷ ವಚನ ಸಾಹಿತ್ಯ ಪೂರಕ ಸಾಹಿತ್ಯದಲ್ಲಿ ಕಾರ್ಯ ಮಾಡಿದವರಿಗೆ " ಸಂಗಮ ಸಿರಿ " ಪ್ರಶಸ್ತಿ ನೀಡಲು ನಿರ್ಧರಿಸಿದಂತೆ ಈ ಕ್ಷೇತ್ರದಲ್ಲಿ ಕಾರ್ಯ ಮಾಡಿದ ಆಕಾಶವಾಣಿ ನಿರ್ದೇಶಕರಾಗಿ ನಿವೃತ್ತರಾದ ಬೆಂಗಳೂರಿನ ಡಾ. ಬಸವರಾಜ ಸಾದರ ಹಾಗೂ ಮಹಾರಾಷ್ಟ್ರ ಪುಣೆಯ ವಿಜ್ಞಾನಿ ಡಾ. ಶಶಿಕಾಂತ್ ಪಟ್ಟಣ್ ಅವರನ್ನು ಆಯ್ಕೆ ಮಾಡಲಾಗಿದೆ. ಡಾ. ಬಸವರಾಜ ಸಾದರವರು ಆಕಾಶವಾಣಿಯ ದಕ್ಷಿಣ ವಲಯ ನಿರ್ದೇಶಕರಾಗಿ ನಿವೃತ್ತರಾಗಿ ಶರಣ ಸಾಹಿತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.೪೧ ಮೌಲಿಕ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ.

ಆಕಾಶವಾಣಿಗಳಲ್ಲಿ ವಚನಗಳ ವಿವರಣೆ ನೀಡುವ ಮೂಲಕ ವಚನಗಳ ಸಾರವನ್ನು ಮನೆ ಮನೆಗೆ ತಲುಪಿಸಿದ ಕೀರ್ತಿ ಇವರದು. ಇದರ ಜೊತೆಗೆ ಕಾರ್ಯಕ್ರಮಗಳ ಸಂಘಟನೆ, ಬರವಣಿಗೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸದ್ಯ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು ಆಗಿದ್ದಾರೆ.

ಡಾ. ಶಶಿಕಾಂತ ಪಟ್ಟಣ ಅವರು ಮೂಲತಃ ರಾಮದುರ್ಗದವರು. ಸಧ್ಯ ಪುಣೆಯಲ್ಲಿ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕರು. ಔಷಧೀಯ ವಿಜ್ಞಾನದ ಶ್ರೇಷ್ಠ ವಿಜ್ಞಾನಿಯಾದ ಅವರು ವಚನ ಸಾಹಿತ್ಯದ ಕುರಿತು ಹಲವು ಕೆಲಸಗಳನ್ನು ಮಾಡಿದ್ದಾರೆ. ವಿವಿಧ ಪ್ರಕಾರದ ೬೪ ಕೃತಿಗಳ ರಚನೆ, ಉಪನ್ಯಾಸ, ಸಂಘಟನೆ ಮೂಲಕ ಶರಣ ಸಾಹಿತ್ಯ ಪೂರಕ ಕಾರ್ಯವನ್ನು ಮಾಡಿದ್ದಾರೆ. ಈ ಇರ್ವರಿಗೂ ತಲಾ ೫,೦೦೦ ರೂ. ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಇದೇ ಡಿ.೨೮ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ. ಬಿ. ಗೌಡಪ್ಪಗೋಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ,‌ ಕಾರ್ಯಕ್ರಮ ಸಂಯೋಜಕ ಡಾ. ಪ್ರಭು ಗಂಜಿಹಾಳ ತಿಳಿಸಿದ್ದಾರೆ.

ವರದಿ : ಸುಧೀರ್ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ