Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕಟ್ಟಡ ಕಾರ್ಮಿಕರಿಗೆ ಉಚಿತ ನಿವೇಶನ ನೀಡಿ’ ಸಿ ಐ ಟಿ ಯು ತಾಲೂಕು ಅಧ್ಯಕ್ಷ ಹೊನ್ನೂರ್ ಸಾಹೇಬ್

Advertisement
ಕಂಪ್ಲಿ : ಕಂಪ್ಲಿ ತಾಲೂಕು ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರಕಾರ ಉಚಿತವಾಗಿ ವಸತಿ ನಿವೇಶನಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿ ಕಂಪ್ಲಿ ಕಟ್ಟಡ ಕಾರ್ಮಿಕರ ಸಂಘದ ನೂರಾರು ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ ಬುಧವಾರ ಬೆಳಗ್ಗೆ 11:45ಕ್ಕೆ ಮೆರವಣಿಗೆ ನಡೆಸಿದರು.

ಸ್ಥಳೀಯ ಉದ್ಭವ ಗಣಪತಿ ದೇವಸ್ಥಾನದಿಂದ ಆರಂಭವಾಗಿ ಮೆರವಣಿಗೆ ಡಾಕ್ಟರ್ ಬಿಆರ್ ಅಂಬೇಡ್ಕರ್ ಸರ್ಕಲ್ ಪುರಸಭೆ ಮುಂಭಾಗದಲ್ಲಿ ಜಮಾಯಿಸಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಸಿಐಟಿಯು ಕಂಪ್ಲಿ ತಾಲೂಕು ಅಧ್ಯಕ್ಷರಾದ ಹೊನ್ನೂರ್ ಸಾಹೇಬ್ ಅವರು ಮಾತನಾಡಿ
ಕಟ್ಟಡ ನಿರ್ಮಾಣಕ್ಕೆ ಬೇಕಾಗಿರುವ ಪರಿಕರಗಳಲ್ಲಿ ಮುಖ್ಯವಾಗಿ ಮರಳಿನ ದರ ಹೆಚ್ಚಾಗಿರುವುದರಿಂದ ಮಧ್ಯಮ ಹಾಗೂ ಕೆಳ ವರ್ಗದವರಿಗೆ ಮರಳು ದೊರೆಯದಂತಾಗಿದೆ. ಮನೆ ಕಟ್ಟಲು ಸಾಕಷ್ಟು ಜನರು ಹಿಂಜರಿಯುವಂತಾಗಿದೆ. ಇದರಿಂದ ಕಟ್ಟಡ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರದಾಡುವಂತಾಗಿದ್ದು ಬೀದಿಗೆ ಬರುವಂತಾಗಿದೆ. ಕಾರ್ಮಿಕರಿಗೆ ಕಟ್ಟಡ ನಿರ್ಮಾಣ ಕಾರ್ಯಬಿಟ್ಟು ಬೇರೆ ಕೆಲಸ ಮಾಡಲುಗೊತ್ತಿಲ್ಲ. ಮರಳು ಉಳ್ಳವರ ಪಾಲಾಗುತ್ತಿದೆ ಎಂದು ದೂರಿದರು.

ರಾಜ್ಯ ಸರಕಾರ ಇತರ ವರ್ಗದ ಜನರ ಸಮಸ್ಯೆಗಳನ್ನು ಬಗೆಹರಿಸಿದಂತೆ ಕಟ್ಟಡ, ಕೂಲಿ ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕು.

ಕಂಪ್ಲಿ ತಾಲೂಕು ಕಟ್ಟಡ ಕಾರ್ಮಿಕರ ಸಂಘಕ್ಕೆ ಸರಕಾರದಿಂದ ನಿವೇಶನ ನೀಡಬೇಕು ಎಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಂಘದ ಸದಸ್ಯರು ಆಗ್ರಹಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ