Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಕೇದ್ರ ಸಚಿವರನ್ನು ಭೇಟಿ ಮಾಡಿ ಕೃಷಿ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚಿಸಿದ ಸಂಸದ ಶೆಟ್ಟರ್

Advertisement
ಬೆಳಗಾವಿ: ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ಶ್ರೀ ಜಗದೀಶ ಶೆಟ್ಟರ ಇವರು ಗುರುವಾರ ದಿನಾಂಕ: 03-04-2025 ರಂದು ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾದ ಶ್ರೀ ಶಿವರಾಜ ಸಿಂಗ್ ಚೌವ್ಹಾಣ್ ಅವರನ್ನು ನವ-ದೆಹಲಿಯ ಸಂಸದ ಭವನದಲ್ಲಿ ಭೇಟಿ ಮಾಡಿ, ಬೆಳಗಾವಿ ಲೋಕಸಭಾ ವ್ಯಾಪ್ತಿಯ ಕೃಷಿ ಕ್ಷೇತ್ರದ ಅಭಿವೃದ್ಧಿಯ ಕುರಿತು ಚರ್ಚಿಸಿದರು.



ಬೆಳಗಾವಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವುದಕ್ಕೆ ಹೆಸರು ವಾಸಿಯಾಗಿದೆ. ಇಲ್ಲಿ ದ್ರಾಕ್ಷಿ, ದಾಳಿಂಬೆ, ಮಾವು, ಹಸಿಮೆಣಸಿನಕಾಯಿ ಇತ್ಯಾದಿ ಬೆಳೆಗಳನ್ನು ಬೆಳೆಯಲಾಗುತ್ತಿದ್ದು. ಇವುಗಳು ಪ್ರಧಾನಮಂತ್ರಿ ಬೆಳೆ ವಿಮಾ ಯೋಜನೆಯ ವ್ಯಾಪ್ತಿಗೆ ಸಹ ಒಳಪಟ್ಟಿವೆ.

ವಿವಿಧ ಗ್ರಾಮಗಳಲ್ಲಿ ದಾಖಲಾಗುವ ಮಳೆ ಪ್ರಮಾಣ, ತಾಪಮಾನ ಮತ್ತು ಆರ್ದ್ರತೆ ಬೇರೆ ಬೇರೆ ಆಗಿರುವುದರಿಂದ ಬೆಳೆ ವಿಮಾ ಪರಿಹಾರವನ್ನು ರೈತರಿಗೆ ಪಾವತಿಸುವಲ್ಲಿ ಅನೇಕ ಬಾರಿ ವ್ಯತ್ಯಾಸ ಕಂಡು ಬರುತ್ತಿದೆ. ಇದರಿಂದಾಗಿ ರೈತರಲ್ಲಿ ವೈಮನಸ್ಸು ಉಂಟಾಗತೊಡಗಿದ್ದು, ಆದ ಕಾರಣ ಇದನ್ನು ತಡೆಯಲು ಸದ್ಯ ಗ್ರಾಮ ಪಂಚಾಯತಿ ಮಟ್ಟದಲ್ಲಿ ಹಾಗೂ ಹೋಬಳಿ ಮಟ್ಟದಲ್ಲಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಹವಾಮಾನ ಕೇಂದ್ರಗಳು ಮತ್ತು ಮಳೆ ಮಾಪನ ಕೇಂದ್ರಗಳನ್ನು ಹೊರತು ಪಡಿಸಿ ಇನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರಸ್ತಾಪಿತ ಇವುಗಳನ್ನು ಎಲ್ಲ ಗ್ರಾಮ ಪಂಚಾಯತಿ ಮಟ್ಟದಲ್ಲಿ ಹಾಗೂ ಹೋಬಳಿ ಮಟ್ಟದಲ್ಲಿಯೇ ಈ ಕೇಂದ್ರಗಳನ್ನು ಅಳವಡಿಸವುದು ಅವಶ್ಯಕವಾಗಿದ್ದು. ಇದರಿಂದ ರೈತರಿಗೆ ಅವರು ಬೆಳೆದ ಬೆಳೆಗಳಿಗೆ ಯೋಗ್ಯ ಬೆಳೆ ವಿಮಾ ಪಾವತಿಸುವಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದು ಸಂಸದರು ಪ್ರಸ್ತಾಪಿಸಿ ಮನವಿ ನೀಡಿದರು.

ಅದರಂತೆ ಬೆಳಗಾವಿ ಜಿಲ್ಲೆ ಒಂದು ದೊಡ್ಡ ಜಿಲ್ಲೆ ಇಲ್ಲಿ ಹಲವಾರು ತಾಲೂಕುಗಳಲ್ಲಿ ಮತ್ತು ವಿಶೇಷವಾಗಿ ಬೆಳಗಾವಿ ತಾಲೂಕಿನಲ್ಲಿ ಹಬುತರ ಗ್ರಾಮ ಪಂಚಾಯತಿಯು ಮಹತ್ಮಾ ಗಾಂಧಿ ಉದ್ಯೋಗ ಖಾತರಿ ಭರವಸೆ ಯೋಜನೆಯಡಿ ಪ್ರಸ್ತಾಪಿದ ಹೆಚ್ಚುವರಿ ಕ್ರೀಯಾ ಯೋಜನೆಸಹ ಜಿಲ್ಲಾ ಪಂಚಾಯತಿಗೆ ಸಲ್ಲಿಸಿ ಅನುಮತಿ ಪಡೆದಿದ್ದರು ಸಹ ಅಧಿಕಾರಿಗಳು ಸಮಯಕ್ಕನುಗುಣವಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದು, ಇದರಿಂದಾಗಿ ಮಹತ್ಮಾ ಗಾಂಧಿ ಉದ್ಯೋಗ ಖಾತರಿ ಭರವಸೆ ಯೋಜನೆಯಡಿ ತಯಾರಿಸಿದ ಕ್ರೀಯಾ ಯೋಜನೆ ಮತ್ತು ಇದರಲ್ಲಿ ಬರುವ ಹಲವು ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನ ಹಂತದಲ್ಲಿ ವಿಫಲತೆ ಕಂಡಿದ್ದು, ಇದರಿಂದಾಗಿ ರೈತರು ತೊಂದರೆ ಅನುಭವಿಸುವಂತಾಗಿದೆ.

ಆದ್ದರಿಂದ ಪ್ರಸ್ತಾಪಿತ ಎರಡು ವಿಷಯಗಳಿಗೆ ಸಂಬಂಧಿಸಿದಂತೆ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಸಚಿವರು ಕೂಡಲೆ ಅಗತ್ಯ ಕ್ರಮವನ್ನು ಜರುಗಿಸಲು ಸಂಸದರು ಕೋರಿದರು.

ವಿಷಯವನ್ನು ಅವಲೋಕಿಸಿ, ಪ್ರಸ್ತಾಪಿತ ಎರಡೂ ವಿಷಯಗಳಿಗೆ ಸಂಬಂಧಿಸಿದಂತೆ ಕೂಡಲೆ ಶೀಘ್ರ ಕ್ರಮವನ್ನು ಜರುಗಿಸುವ ಬಗ್ಗೆ ಸ್ಪಷ್ಟ ಭರವಸೆಯನ್ನು ಕೇಂದ್ರ ಕೃಷಿ ಮತ್ತು ಗ್ರಾಮೀಣ ಅಭಿವ್ರದ್ದಿ ಸಚಿವರು ಶ್ರೀ ಶಿವರಾಜ ಸಿಂಗ್ ಚೌವ್ಹಾಣ್ ನೀಡಿದ್ದಾರೆಂದು ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ ಶೆಟ್ಟರ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ