Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಸ್ವಾಮಿ ಕೊಲೆ ಪ್ರಕರಣ : ಇದುವರೆಗೆ 13 ಆರೋಪಿಗಳ ಅರೆಸ್ಟ್

Advertisement

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಗೌಡ ಸೇರಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ.


ನಟ ದರ್ಶನ್, ಪವಿತ್ರಗೌಡ, ಎಸ್ ಪ್ರದೋಷ್, ಕೆ ಪವನ್, ನಂದೀಶ್, ಕಾರ್ತಿಕ್ , ನಿಖಿಲ್ ನಾರಾಯಣ್.ಆರ್ ವಿನಯ್, ರಾಘವೇಂದ್ರ ಅಲಿಯಾಸ್ ರಾಘು ಸೇರಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ. ಇಂದು ಸಂಜೆ 4 :30 ಕ್ಕೆ ಬಂಧಿತ ಆರೋಪಿಗಳನ್ನು ಬೆಂಗಳೂರಿನ 24 ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗುತ್ತದೆ.


ಚಿತ್ರದುರ್ಗದ ರೇಣುಕಾ ಸ್ವಾಮಿ ( ಕೊಲೆಯಾದ ವ್ಯಕ್ತಿ) ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ, ಫೋಟೋ ಕಳುಹಿಸಿದ್ದನು ಎನ್ನಲಾಗಿದೆ. ಪವಿತ್ರ ಗೌಡ ಕೂಡ ಈ ವಿಚಾರವನ್ನು ದರ್ಶನ್ ಗಮನಕ್ಕೆ ತಂದಿದ್ದರು ಎನ್ನಲಾಗಿದೆ. ನಂತರ ಯಾರೋ ಒಬ್ಬರು ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ರಾಘವೇಂದ್ರ ಎಂಬುವವರಿಗೆ ಕರೆ ಮಾಡಿ ಈ ವಿಚಾರ ತಿಳಿಸಿದ್ದಾರೆ.


ನಂತರ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಕಾರ್ ಶೆಡ್ ಒಂದರಲ್ಲಿ ಹಲ್ಲೆ ನಡೆಸಲಾಗಿದೆ. ನಾಲ್ಕು ಮಂದಿ ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿದ್ದು, ಈ ವೇಳೆ ನಟ ದರ್ಶನ್ ಕೂಡ ಸ್ಥಳದಲ್ಲಿದ್ದರು ಎನ್ನಲಾಗಿದೆ.


ಕಳೆದ ವರ್ಷವಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ರೇಣುಕಾಸ್ವಾಮಿ ಇದೀಗ ಕೊಲೆ ಆಗಿ ಹೋಗಿದ್ದಾರೆ. ರೇಣುಕಾಸ್ವಾಮಿ ಪತ್ನಿ ಈಗ ಮೂರು ತಿಂಗಳ ಗರ್ಭಿಣಿಯಾಗಿದ್ದಾರೆ.


ಕೊಲೆಯಾಗಿರುವ ರೇಣುಕಾಸ್ವಾಮಿ ದರ್ಶನ್ ಅಪ್ಪಟ ಅಭಿಮಾನಿಯಾಗಿದ್ದು, ದರ್ಶನ್ ಸಂಸಾರದಲ್ಲಿ ಪವಿತ್ರಾ ಗೌಡ ಪ್ರವೇಶವನ್ನು ಸಹಿಸದ ರೇಣುಕಾಸ್ವಾಮಿ ಬಹಳ ಬೇಸರಗೊಂಡಿದ್ದನು. ನಮ್ಮ ಡಿ ಬಾಸ್ ದಾಂಪತ್ಯದಲ್ಲಿ ಮನಸ್ತಾಪ ಉಂಟಾಗುತ್ತಿದೆ ಎಂಬುದನ್ನು ತಿಳಿದು ಬೇಸರಗೊಂಡಿದ್ದ ಅಭಿಮಾನಿ ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಸೋಷಿಯಲ್ ಮೀಡಿಯಾದಲ್ಲಿ ಬೈದಿದ್ದನು ಎನ್ನಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ