LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಜಮಾತ್ ಉಲ್ ಮುಜಾಹಿದೀನ್ ಸಂಘಟನೆಯ 13 ಶಂಕಿತ ಉಗ್ರರರು ಅರೆಸ್ಟ್ 

Advertisement

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ಭಾರತದ ರಾಜ್ಯಗಳಲ್ಲಿ ಯುವಕರನ್ನು ತೀವ್ರವಾದದತ್ತ ಸೆಳೆದು, ದೇಶಾದ್ಯಂತ ಭಾರಿ ಉಗ್ರ ದಾಳಿ ನಡೆಸಲು ಸಂಚು ರೂಪಿಸಿದ್ದ ಜಮಾತ್ ಉಲ್ ಮುಜಾಹಿದೀನ್ ಬಾಂಗ್ಲಾದೇಶ್ (JMB) ಸಂಘಟನೆಯ 13 ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.

ತನಿಖೆಯನ್ನು ತೀವ್ರಗೊಳಿಸಿರುವ NIA ಅಧಿಕಾರಿಗಳು ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಕೇರಳದ ಒಟ್ಟು 16 ವಿವಿಧ ಪ್ರದೇಶಗಳಲ್ಲಿ ಏಕಕಾಲಕ್ಕೆ ಮಿಂಚಿನ ಶೋಧ ಕಾರ್ಯಾಚರಣೆ ನಡೆಸಿ ಈ ಬಂಧನ ಮಾಡಿದ್ದು, ಆರೋಪಿಗಳಿಂದ ಮೊಬೈಲ್ ಫೋನ್‌ಗಳು ಹಾಗೂ ಪೆನ್‌ಡ್ರೈವ್‌ಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಹಿಂದೆ 2025ರ ಡಿಸೆಂಬರ್‌ನಲ್ಲಿ ಅಸ್ಸಾಂ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ 11 ಜನರನ್ನು ಬಂಧಿಸಿದ್ದರು.

ತದನಂತರ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತನಿಖೆಯನ್ನು ತನ್ನ ವಶಕ್ಕೆ ಪಡೆದ NIA, ಈಗಾಗಲೇ ದೋಷಾರೋಪಣೆ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ. ಬಾಂಗ್ಲಾದೇಶ ಮೂಲದ ಈ ಉಗ್ರ ಸಂಘಟನೆಯು ಭಾರತದಾದ್ಯಂತ ತನ್ನ ಜಾಲವನ್ನು ವಿಸ್ತರಿಸುವ ಬೃಹತ್ ಸಂಚು ರೂಪಿಸಿತ್ತು ಎಂಬ ಆಘಾತಕಾರಿ ಸತ್ಯ ತನಿಖೆಯಿಂದ ಬಹಿರಂಗಗೊಂಡಿದ್ದು, ರಾಷ್ಟ್ರೀಯ ಭದ್ರತಾ ಸಂಸ್ಥೆಗಳು ಜಾಲದ ಉಳಿದ ಕೊಂಡಿಗಳನ್ನು ಪತ್ತೆಹಚ್ಚಲು ಕಾರ್ಯಾಚರಣೆ ಮುಂದುವರಿಸಿವೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರಿಗೆ ಕೇಂದ್ರದ ಗಿಫ್ಟ್: 6 ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅಸ್ತು ಭಾರತಕ್ಕೆ 406 ರನ್ ಗಳ ದೊಡ್ಡ ಮೊತ್ತದ ಗೆಲುವಿನ ಗುರಿ ಇಡಿ ದುರ್ಬಳಕೆ ಮೂಲಕ ದಲಿತ ನಾಯಕರನ್ನು ಹತ್ತಿಕ್ಕುವ ಸಂಚು : ನಾಯ್ಡು ನಾಯಕಭಾಗ್ಯ ಶ್ರೀ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಮಾಡಿ ಸಮಾಜ ಸೇವೆಗೆ ಯುವಕರ ಬೆಂಬಲಸ್ವಂತ ಮೊಮ್ಮಗಳ ಮೇಲೆಯೇ ಅತ್ಯಾ*ಚಾರಕ್ಕೆ ಯತ್ನಿಸಿದ ಅಜ್ಜ! ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ಕಲ್ಪಿಸಲು ಮನವಿಬಿಜೆಪಿ ಅವಧಿಯ ಅನಾಹುತದಿಂದಲೇ ನಮಗೆ ಆರ್ಥಿಕ ಇಲಾಖೆ ಪತ್ರ ಬರೆದಿದೆ : ಡಿ.ಕೆ.ಶಿವಕುಮಾರ್ನೂತನ ಡಿವೈಎಸ್ಪಿ ಅಧಿಕಾರ ಸ್ವೀಕಾರ  ಸನ್ಮಾನಶೀಘ್ರದಲ್ಲೇ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ನಿರ್ಧಾರ: ಬೈರತಿ ಸುರೇಶ್ದ. ಅಪ್ರಿಕಾ- ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಅಡ್ಡಿ