LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಬರೋಬ್ಬರಿ 14.95 ಕೋಟಿ ರೂ. ಅಕ್ರಮ : ತನಿಖೆಯಲ್ಲಿ ಬಯಲು

Advertisement

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಕುತೂಹಲ ಮತ್ತು ಚರ್ಚೆಗೆ ಗ್ರಾಸವಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.

ಈ ಬೃಹತ್ ಹಣಕಾಸು ಅಕ್ರಮಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ (PMLA) ಹೆಚ್ಚುವರಿ ಚಾರ್ಜ್‌ಶೀಟ್(Chargesheet) ಸಲ್ಲಿಸಿದ್ದು, ಬರೋಬ್ಬರಿ 14.95 ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆಯನ್ನು ಬಯಲಿಗೆಳೆದಿದ್ದಾರೆ.

ಇಡಿ ಅಧಿಕಾರಿಗಳು ಸಲ್ಲಿಸಿರುವ ಈ ಹೊಸ ದೋಷಾರೋಪಪಟ್ಟಿಯಲ್ಲಿ ಆಯೂಬ್ ಸಯ್ಯದ್ ಸೇರಿದಂತೆ ಒಟ್ಟು ಐದು ಮಂದಿ ಆರೋಪಿಗಳ ಹೆಸರುಗಳನ್ನು ಸೇರಿಸಲಾಗಿದೆ. 

ನಕಲಿ ದಾಖಲೆಗಳನ್ನು ಸೃಷ್ಟಿಸಿ, ವ್ಯಕ್ತಿಗಳ ಗುರುತು ಮರೆಮಾಚಿ ಅಕ್ರಮವಾಗಿ ನಿಗಮದ ಹಣವನ್ನು ಲೂಟಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತನ್ನ ತನಿಖಾ ವರದಿಯಲ್ಲಿ ಗಂಭೀರ ಆರೋಪ ಮಾಡಿದೆ.

ಇಡಿ ಸಲ್ಲಿಸಿರುವ ಹೆಚ್ಚುವರಿ ಆರೋಪಪಟ್ಟಿಯಲ್ಲಿ ಅಕ್ರಮದ ಸಂಪೂರ್ಣ ಕಾರ್ಯವಿಧಾನವನ್ನು ವಿವರವಾಗಿ ಉಲ್ಲೇಖಿಸಲಾಗಿದೆ. ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹೆಸರಿನಲ್ಲೇ ವಂಚಕರು ನಕಲಿ ಬ್ಯಾಂಕ್ ಖಾತೆಗಳನ್ನು ಸೃಷ್ಟಿಸಿದ್ದರು. 

ಅಷ್ಟೇ ಅಲ್ಲದೆ, ನಾಲ್ಕು ನಕಲಿ ಫಿಕ್ಸ್ಡ್ ಡೆಪಾಸಿಟ್ (ಎಫ್‌ಡಿ) ಖಾತೆಗಳನ್ನು ತೆರೆದು, ನಿಗಮಕ್ಕೆ ಸೇರಬೇಕಾದ ಸಾರ್ವಜನಿಕ ಹಣವನ್ನು ಅಕ್ರಮವಾಗಿ ಆ ಖಾತೆಗಳಿಗೆ ವರ್ಗಾಯಿಸಲಾಗಿತ್ತು. 

ನಂತರ ಆ ಹಣವನ್ನು ವಿವಿಧ ಬೇನಾಮಿ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ರವಾನಿಸಿ, ಕೊನೆಗೆ ನಗದು ರೂಪದಲ್ಲಿ ಹಿಂಪಡೆದು ದುರುಪಯೋಗಪಡಿಸಿಕೊಳ್ಳಲಾಗಿದೆ.

ಈ ಇಡೀ ಜಾಲದ ಮೂಲಕ ಒಟ್ಟು 14.95 ಕೋಟಿ ರೂಪಾಯಿಗಳನ್ನು ದೋಚಲಾಗಿದೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆತರಗತಿಯಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಬಾಲಿವುಡ್ ನಟರಿಗೆ ಬೆದರಿಕೆ : ಬೆಂಗಳೂರಿನ ಟೆಕ್ಕಿ ಅರೆಸ್ಟ್ ಡೀಸೆಲ್ ಬೆಲೆ ಹೆಚ್ಚಾದಾಗ ಯಾರೂ ಮಾತನಾಡಲಿಲ್ಲ : ಡಿ. ಕೆ ಶಿವಕುಮಾರ್ ಅಗ್ನಿವೀರರ ಸೇವಾ ಅವಧಿ ಮತ್ತೆ 2 ವರ್ಷ ವಿಸ್ತರಣೆ : ಕೇಂದ್ರ ಅನುಮೋದನೆ ಕಬ್ಬಿನ ಬೆಳೆಗಾರರ ಸಂಧಾನ ಸಭೆಗಳು ವಿಫಲ : ಡಿಸಿ ಕಚೇರಿಗೆ ಬೀಗ ಹಾಕಲು‌ ಯತ್ನಿಸಿದ ರೈತರು ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಸುಲಭ ಜಯಅಸ್ಸಾಮ್ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ 314 ರನ್ ಗಳ ದೊಡ್ಡ ಗೆಲುವು ಗೃಹಲಕ್ಷ್ಮಿಯರ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು? : ನಿಖಿಲ್ ಕುಮಾರಸ್ವಾಮಿಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮ ಅಪ್ರಸ್ತುತ