LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ಎಡಿಬಿ ನೆರವು : ಮಹತ್ವದ ಒಪ್ಪಂದಕ್ಕೆ ಸಹಿ

Advertisement

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಇಂದು ಮಹತ್ವದ ದಿನ. ರಾಜ್ಯದಲ್ಲಿನ 500 ಸರ್ಕಾರಿ ಶಾಲೆಗಳನ್ನು 'ಕರ್ನಾಟಕ ಪಬ್ಲಿಕ್ ಶಾಲೆ' (KPS)ಗಳಾಗಿ ಅಭಿವೃದ್ಧಿಪಡಿಸಲು 1,750 ಕೋಟಿ ರೂ.ಗಳ ನೆರವು ಘೋಷಿಸಿರುವ ʻಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ʼ (ADB) ಮತ್ತು ರಾಜ್ಯ ಸರ್ಕಾರ ಇಂದು ಈ ಸಂಬಂಧದ ಮಹತ್ವದ ಒಪ್ಪಂದಕ್ಕೆ ಸಹಿ ಮಾಡಿವೆ.

ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಡಿಬಿ ಬ್ಯಾಂಕಿನ ಅಧಿಕಾರಿಗಳು ಈ ಒಪ್ಪಂದಕ್ಕೆ ಸಹಿ ಹಾಕಿದರು.

 ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಅಂದರೆ 2029-30ನೇ ಸಾಲಿನ ಒಳಗೆ ರಾಜ್ಯ ಸರ್ಕಾರವು 2,500 ಕೋಟಿ ರೂ. ವಿನಿಯೋಗಿಸಿ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸಲಿದೆ. ಇದಕ್ಕೆ ಎಡಿಬಿ ಬ್ಯಾಂಕ್ 1,750 ಕೋಟಿ ರೂ.ಗಳ ನೆರವು ನೀಡಲಿದೆ.

ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ಸಾಮರ್ಥ್ಯ ಹೊಂದಿರುವ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಪ್ರತಿ ಶಾಲೆಯಲ್ಲೂ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಾಮರ್ಥ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ಎಡಿಬಿಯ ನೆರವಿನಿಂದ ಒಟ್ಟು 500 ಕೆಪಿಎಸ್ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ.

ಅಧಿಕಾರಿಗಳು ಈ ಒಪ್ಪಂದಕ್ಕೆ ಸಹಿ ಹಾಕಿದ ಸಂದರ್ಭದಲ್ಲಿ ರಾಜ್ಯದ ಮಾನ್ಯ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಏಷ್ಯನ್ ಅಭಿವೃದ್ಧಿ ಬ್ಯಾಂಕ್ನ ಕಂಟ್ರಿ ಡೈರೆಕ್ಟರ್ ಮಿಯೋ ಓಕಾ, ಎಡಿಬಿಯ ಪ್ರಿನ್ಸಿಪಲ್ ಪೋರ್ಟ್ಫೋಲಿಯೊ ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್ ಕೈ ವೇಯ್ ಯಿಯೋ, ಎಡಿಬಿ ಬ್ಯಾಂಕಿನ ಹಿರಿಯ ಪ್ರಾಜೆಕ್ಟ್ ಆಫೀಸರ್ (ಶಿಕ್ಷಣ) ಪೂನಂ ಎಸ್. ಭಾಂಬ್ರಿ, ಎಡಿಬಿಯ ಪ್ರಿನ್ಸಿಪಲ್ ಕಮ್ಯುನಿಕೇಷನ್ಸ್ ಆಫೀಸರ್ ರಾಜೇಶ್ ಕುಮಾರ್ ಡಿಯೋಲ್, ಎಕ್ಸಿಕ್ಯೂಟಿವ್ ಅಸಿಸ್ಟೆಂಟ್ ಪೂರ್ಣಿಮಾ ಪ್ರಸಾದ್ಮಾನ್ಯ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ವಿ. ಮಹೇಶ್, ಆರ್ಥಿಕ ವ್ಯವಹಾರಗಳ ಇಲಾಖೆ ಉಪಕಾರ್ಯದರ್ಶಿ ಸೌರಭ್ ಸಿಂಗ್, ಎಡಿಬಿ ಬ್ಯಾಂಕಿನ ಮತ್ತು ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುವ ಸಾಮರ್ಥ್ಯ ಹೊಂದಿರುವ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಪ್ರತಿ ಶಾಲೆಯಲ್ಲೂ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಸಾಮರ್ಥ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ಎಡಿಬಿಯ ನೆರವಿನಿಂದ ಒಟ್ಟು 500 ಕೆಪಿಎಸ್ ಶಾಲೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST