LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ

Advertisement
ಯಾದವಾಡ: ರಕ್ತದಾನ ಮಹತ್ವವಾದದ್ದು ಮಾನವೀಯ ಸೇವೆಯಲ್ಲಿ ಅತ್ಯಂತ ಶ್ರೇಷ್ಠವಾದ ದಾನವಾಗಿದೆ. ಅಪಘಾತ ಶಸ್ತ್ರಚಿಕಿತ್ಸೆಯಂತ ತುರ್ತು ಪರಿಸ್ಥಿತಿಗಳಲ್ಲಿ ರಕ್ತದ ಅಗತ್ಯ ಬಹಳವಾಗಿರುತ್ತದೆ ರಕ್ತದಾನ ಮಾಡುವುದರ ಮೂಲಕ ವಿದ್ಯಾರ್ಥಿಗಳು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಿ ಹಾಗೂ ವಿದ್ಯಾರ್ಥಿಗಳು ಸಮಾಜದ ಒಳಿತಿಗಾಗಿ ರಕ್ತದಾನ ಮಾಡಲು ಮುಂದಾಗಬೇಕೆಂದು ರಾಮದುರ್ಗದ ಪ್ಯಾಥೋಲಾಜಿಸ್ಟ ಜನರಲ್ ಹಾಸ್ಪಿಟಲ್ ವೈದ್ಯರಾದ ಡಾ. ರವೀಂದ್ರ.ಜಿ. ಪಾಟೀಲ ಹೇಳಿದರು.

ಸ್ಥಳೀಯ ಶ್ರೀಮತಿ ಐ ಎಸ ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ರೆಡಕ್ರಾಸ್ ಮತ್ತು ರಾಷ್ಟ್ರೀಯ ಸ್ವಯಂ ಸೇವಾ ಘಟಕಗಳ ಸಂಯುಕ್ತಾಶ್ರಯದಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಓದು ಮಾತ್ರವಲ್ಲದೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಿ ರಕ್ತದಾನ ಮಾಡುವುದರಿಂದ ಯಾವುದೇ ಹಾನಿಯಾಗುವುದಿಲ್ಲ ಬದಲಾಗಿ ದೈಹಿಕ, ಮಾನಸಿಕವಾಗಿ ಆರೋಗ್ಯವಂತರಾಗುತ್ತೀರಿ ಹಾಗೂ ರಕ್ತದಾನ ಜೀವದಾನಕ್ಕೆ ಸಮಾನವೆಂದು ಹೇಳಿದರು.
ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ. ಡಿ ಕಮತಗಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ರಕ್ತದಾನ ಮಹತ್ವವನ್ನು ವಿವರಿಸಿ ರಕ್ತದಾನ ಮಹಾದಾನವಾಗಿದೆ ನಾವು ಕೊಡುವ ರಕ್ತವು ಮತ್ತೊಬ್ಬರ ಜೀವವನ್ನು ಉಳಿಸಬಲ್ಲದು ಆದ್ದರಿಂದ ವಿದ್ಯಾರ್ಥಿಗಳು ಸಮಾಜ ಸೇವೆ ಮನೋಭಾವದಿಂದ ರಕ್ತದಾನ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಸ್. ಐ.ಚಿಕ್ಕನರಗುಂದ ಐ.ಕ್ಯು.ಎ.ಸಿ ಸಂಯೋಜಕರಾದ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಂಜಯ ಹಾದಿಮನಿ, ರೆಡ್ ಕ್ರಾಸ್ ಸಂಯೋಜಕರು ಹಾಗೂ ಕನ್ನಡ ಉಪನ್ಯಾಸಕರಾದ ಡಾ. ವೆಂಕಟೇಶ, ಎನ್.ಎಸ್.ಎಸ್ ಘಟಕದ ಸಂಯೋಜನಾಧಿಕಾರಿಗಳಾದ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿನಾಯಕ ಹೊಸಮನಿ, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸಿದ್ಧಾರೂಡ ಬಸಳಿಗುಂದಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಎ. ಬಿ ವಗ್ಗರ ಹಾಗೂ ಬೋದಕ ಬೋದಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು.

ವರದಿ : ಮಲ್ಲಿಕಾ ಮುರಗೋಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ