LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕಾಂಗ್ರೆಸ್‌ನ 25 ಶಾಸಕರು ಬಿಜೆಪಿ ಸೇರಲು ಸಿದ್ಧ: ಬಿ.ವೈ. ವಿಜಯೇಂದ್ರ

Advertisement

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಆಪರೇಷನ್ ಕಮಲದ ಸದ್ದು ಜೋರಾಗಿದ್ದು, ಮುಂಬರುವ ದಿನಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದರೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಂಪುಟದ ಸಚಿವರೂ ಸೇರಿದಂತೆ 20 ರಿಂದ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷವು ಯಾರನ್ನೂ ಸೆಳೆಯುವ ಪ್ರಯತ್ನ ಮಾಡುತ್ತಿಲ್ಲ. ಆದರೆ, ಪ್ರಸ್ತುತ ರಾಜ್ಯದಲ್ಲಿ ಅಂತಹ ವಾತಾವರಣ ನಿರ್ಮಾಣವಾಗಿದೆ.

 ನಾಳೆಯೇ ಚುನಾವಣೆ ಘೋಷಣೆಯಾದರೆ ಸಚಿವರು ಸೇರಿದಂತೆ 25 ಕಾಂಗ್ರೆಸ್ ಶಾಸಕರು ಕಮಲ ಪಾಳೆಯ ಸೇರುವುದು ಖಚಿತ ಎಂದು ಪ್ರತಿಪಾದಿಸಿದ್ದಾರೆ.

ಆಡಳಿತ ಪಕ್ಷದ ಶಾಸಕರಿಗಾಗಲಿ ಅಥವಾ ಸಚಿವರಿಗಾಗಲಿ ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಉಳಿದಿಲ್ಲ. ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಕಾಂಗ್ರೆಸ್ ಪಕ್ಷದಲ್ಲಿ ತಮ್ಮ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಇದೇ ವೇಳೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಸ್ಟಿಂಗ್ ಆಪರೇಷನ್ ವಿಚಾರವಾಗಿಯೂ ಕಿಡಿಕಾರಿದ ವಿಜಯೇಂದ್ರ, ಕಾಂಗ್ರೆಸ್‌ನಲ್ಲಿ ಅಧಿಕಾರವನ್ನು ಕಬಳಿಸಲು ಕೆಲವರು ಈ ಹಂತಕ್ಕೆ ಇಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಕ್ಕಾಗಿ ಅಥವಾ ಸಿಎಂ, ಸಚಿವ ಸ್ಥಾನ ಪಡೆಯುವುದಕ್ಕಾಗಿ ಸ್ವಪಕ್ಷೀಯರ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿಸುವುದು ಒಂದು ರೀತಿಯ 'ರಾಜಕೀಯ ವ್ಯಭಿಚಾರ' ಎಂದು ಕಟುವಾಗಿ ಲೇವಡಿ ಮಾಡಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST