ಹೊಸಪೇಟೆ: ರಾಜ್ಯದಲ್ಲಿ ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಂಕಷ್ಟದಲ್ಲಿರುವ ರೈತರ ನೆರವಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ.
ಮೊದಲ ಕಂತಿನಲ್ಲಿ 1,250 ಕೋಟಿ ರೂ. ಬಿಡುಗಡೆ ಮಾಡಿದ್ದು, ಮೊದಲ ಕಂತಾಗಿ 2,500 ಪರಿಹಾರ ಮೊತ್ತ 2-3 ದಿನಗಳಲ್ಲಿ ನೇರವಾಗಿ ರೈತರ ಖಾತೆಗೆ ಜಮೆ ಆಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.
ಹೊಸಪೇಟೆ ತಾಲೂಕಿನ ಪೋತಲಕಟ್ಟೆ ಗ್ರಾಮದಲ್ಲಿ ಮಳೆಯಿಲ್ಲದೆ ಒಣಗುತ್ತಿರುವ ಮೆಕ್ಕೆಜೋಳ ಬೆಳೆ ಹಾನಿಯನ್ನು ವೀಕ್ಷಿಸಿ, ರೈತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ 50 ದಿಂದ 60 ಸಾವಿರ ಕೋಟಿಯಷ್ಟು ಬೆಳೆ ಹಾಗೂ ಆಸ್ತಿ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.
ಎನ್‌ಡಿಆರ್‌ಎಫ್ ನಿಯಮಾವಳಿಗಳ ಅನ್ವಯ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಸುಮಾರು 10ರಿಂದ 11 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿದೆ ಎಂದರು.


