Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿ.ಟಿ.ರವಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಿರಾಕರಣೆ

Advertisement
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್​ ಪಕ್ಷದ ಶಾಸಕಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ವಿಧಾನ ಪರಿಷತ್​ ಸದಸ್ಯ ಸಿ.ಟಿ.ರವಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಿರಾಕರಿಸಿದೆ. ಈ ಆದೇಶದಿಂದಾಗಿ ಸಿ.ಟಿ. ರವಿ ಅವರಿಗೆ ಹಿನ್ನಡೆಯಾಗಿದ್ದು, ಇದೀಗ ಪ್ರಕರಣದ ವಿಚಾರಣೆ ಎದುರಿಸುವ ಅನಿವಾರ್ಯತೆ ಉಂಟಾಗಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಸದನದಲ್ಲಿ ಅರ್ಜಿದಾರ ರವಿ ಒಂದು ವೇಳೆ ಅವಹೇಳನಕಾರಿ ಪದ ಬಳಕೆ ಮಾಡಿದ್ದೇ ಆದಲ್ಲಿ ಮಹಿಳೆಯ ಘನತೆಗೆ ಧಕ್ಕೆ ತರುವಂತಾಗಿದೆ. ಅಲ್ಲದೆ, ಆ ರೀತಿಯ ಪದ ಬಳಕೆ ಮಾಡಿದ್ದೇ ಆದಲ್ಲಿ ಅದು ಸದನದಲ್ಲಿನ ಶಾಸಕರ ರಕ್ಷಣಾ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಪೀಠ ತಿಳಿಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.

ಅರ್ಜಿ ವಿಚಾರಣೆ ವೇಳೆ ಸಿ.ಟಿ.ರವಿ ಪರವಾಗಿ ವಾದ ಮಂಡಿಸಿದ್ದ ವಕೀಲರು, ಸದನದಲ್ಲಿ ಸದಸ್ಯರಿಗೆ ಸಂಪೂರ್ಣವಾದ ವಿನಾಯಿತಿ ಇರುತ್ತದೆ. ಸದನದಲ್ಲಿ ನಡೆದ ವಿಚಾರವನ್ನು ಆಧರಿಸಿ ಕ್ರಿಮಿನಲ್‌ ಅಥವಾ ಸಿವಿಲ್‌ ಪ್ರಕರಣ ಹೂಡಲಾಗದು. ಈ ಸಂಬಂಧ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಲಾಗಿದ್ದು, ಅವರು ರೂಲಿಂಗ್‌ ನೀಡಿದ್ದಾರೆ. ಹೀಗಾಗಿ ಎಫ್‌ಐಆರ್‌ ದಾಖಲಿಸಲು ಅವಕಾಶವಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಸದನ ನಡೆಯಲಿ, ನಡೆಯದಿರಲಿ, ಸದಸ್ಯರು ಭಾಗಿಯಾಗಲಿ ಭಾಗಿಯಾಗದಿರಲಿ ಅವರು ಸದನದಲ್ಲಿ ಮಾತನಾಡುವ ಎಲ್ಲ ಮಾತುಗಳಿಗೂ ರಕ್ಷಣೆ ಇರಲಿದೆ. ಅರ್ಜಿದಾರ ಸಿ.ಟಿ ರವಿ ಮತ್ತು ದೂರುದಾರರಾದ ಲಕ್ಷ್ಮಿ ಹೆಬ್ಬಾಳ್ಕರ್ ಸದನದ ಸದಸ್ಯರಾಗಿದ್ದಾರೆ. ಅವರ ಬಗ್ಗೆ ಅರ್ಜಿದಾರರಿಗೆ ಗೌರವ ಇದೆ ಎಂದು ನಾವದಗಿ ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ