ಬಾಗಲಕೋಟೆ: ರಾಜ್ಯದಲ್ಲಿ ಬರ (Drought) ಪರಿಸ್ಥಿತಿಯ ಅವಲೋಕನ ನಡೆಸಿದ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು, ಬರ ಪರಿಸ್ಥಿತಿಯ ಕುರಿತು ಕೇಂದ್ರಕ್ಕೆ (Central) ನಾವು ವರದಿ ಸಲ್ಲಿಸುತ್ತೇವೆ. ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ ಎರಡನೇ (Bagalkote) ಪಟ್ಟಿ ಘೋಷಣೆಯಾಗಲಿದೆ ಎಂದು ತಿಳಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ರೈತರ ಕಷ್ಟಗಳನ್ನ ಆಲಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ರೈತರು ಬೆಳೆ ಹಾಕಿದ್ದಾರೆ.
ಆದರೆ, ಯಾರಿಗೂ ಬೆಳೆ ಕೈಗೆ ಸಿಕ್ಕಿಲ್ಲ. ಸೂರ್ಯಕಾಂತಿ, ಈರುಳ್ಳಿ ಹಾಗೂ ತೊಗರಿ ಬೆಳೆಗಳು ಹಾನಿಗೊಳಗಾಗಿವೆ. ರೈತರು ಪ್ರತಿ ಎಕರೆಗೆ ₹20 ರಿಂದ ₹30 ಸಾವಿರದವರೆಗೆ ಖರ್ಚು ಮಾಡಿದ್ದಾರೆ.
ಬರ ಪರಿಹಾರದ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮುಂದಿನ ದಿನಗಳಲ್ಲಿ ರೈತರಿಗೆ ಯಾವೆಲ್ಲ ರೀತಿಯ ಸಹಾಯ ಮಾಡಬಹುದು ಎಂಬುದರ ಕುರಿತು ಯೋಚನೆ ಮಾಡುತ್ತಿದ್ದೇನೆ ಎಂದರು.
ಕೇಂದ್ರ ಸರ್ಕಾರವೂ ರೈತರ ಸಹಾಯಕ್ಕೆ ಬರಬೇಕು. ನಾಡಿನ ರೈತರಿಗಾಗಿ ಬಿಜೆಪಿಯವರೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ, ರೈತರ ಸಾಲಮನ್ನಾ ಮಾಡಿಸಬೇಕು. ಎಲ್ಲಾ ಬ್ಯಾಂಕ್‌ಗಳು ಕೇಂದ್ರ ಸರ್ಕಾರದ ವಶದಲ್ಲಿವೆ. ಇದೆಲ್ಲವನ್ನೂ ಮಾಡುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.


