Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯರಿಂದ 300 ರೂ. ಊಟ ಕೊಟ್ಟು 300 ಕೋಟಿ ವಸೂಲಿ : ಆರ್ ಅಶೋಕ್ ವಾಗ್ದಾಳಿ

Advertisement
ಬೆಂಗಳೂರು: ಸಿದ್ದರಾಮಯ್ಯ ಟಾರ್ಗೆಟ್ ಫಿಕ್ಸ್ ಆಗಿದೆ; ಕರ್ನಾಟಕದ ಬೊಕ್ಕಸ ಬರಿದಾಗಿದೆ. ಇದು ಡಿನ್ನರ್ ರಾಜಕೀಯದ ಕಾರ್ಯಸೂಚಿ ಎಂದು ಆರ್. ಅಶೋಕ್ ಅವರು ಆರೋಪಿಸಿದರು.

ಬಿಹಾರಕ್ಕೆ 300 ಕೋಟಿಗೆ ಸಂಬಂಧಿಸಿ 300 ಚಿನ್ನದ ಗಟ್ಟಿಗಳು ಹೋಗಬೇಕಿತ್ತು. ಈಗ ಸಿದ್ದರಾಮಯ್ಯನವರು ಎಲ್ಲ ಸಚಿವರಿಗೆ ಒಂದೊಂದು ಚಿನ್ನದ ಗಟ್ಟಿ ಫಿಕ್ಸ್ ಮಾಡಿದ್ದಾರೆ.

ಇಲಾಖೆ ಭಾರದನ್ವಯ ಕೋಟಿ ಕೋಟಿ ಕೊಟ್ಟರೆ ನೀವು ಡಿಸೆಂಬರ್‍ನಲ್ಲಿ ಸಚಿವರಾಗಿ ಇರುತ್ತೀರಿ; ಇಲ್ಲವಾದರೆ, ಜನವರಿಯಲ್ಲಿ ನೀವು ಇರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು. 300 ರೂ. ಊಟ ಕೊಟ್ಟು 300 ಕೋಟಿ ವಸೂಲಿ ಮಾಡಿದ್ದಾರೆ ಎಂದರು.

ಇದು ಅವರ ಮುಖಕ್ಕೆ ಮಂಗಳಾರತಿ ಎತ್ತಿದಂತಲ್ಲವೇ ಕಿರಣ್ ಮಜುಂದಾರ್ ಅವರು ಟ್ವೀಟ್ ಮಾಡಿದ್ದಾರೆ. ಚೀನಾದ ಕಂಪೆನಿಯು ರಸ್ತೆಯ ಪರಿಸ್ಥಿತಿ ಕೆಟ್ಟದಾಗಿ ಇರುವ ಕುರಿತು ಕಸದ ರಾಶಿ ಬಗ್ಗೆ ತಿಳಿಸಿ, ಹೂಡಿಕೆ ಬೇಡವೇ ಎಂದು ಕೇಳಿದೆ ಎಂದು ಪ್ರಸ್ತಾಪಿಸಿದ್ದಾರೆ ಎಂದು ಗಮನಕ್ಕೆ ತಂದರು. ಇದು ಅವರ ಮುಖಕ್ಕೆ ಮಂಗಳಾರತಿ ಎತ್ತಿದಂತಲ್ಲವೇ ಎಂದು ಕೇಳಿದರು.

ಮೋಹನ್‍ದಾಸ್ ಪೈ ಅವರು ಲಂಚಗುಳಿತನದ ಕುರಿತು ಪ್ರಸ್ತಾಪಿಸಿದ್ದರು ಎಂದು ವಿವರಿಸಿದರು. ಬ್ಲಾಕ್ ಬಗ್ಸ್ ಇಷ್ಟವಿದ್ದರೆ ಇರಲಿ; ಇಲ್ಲವಾದರೆ ಔಟ್ ಎಂದು ಅಶ್ವತ್ಥನಾರಾಯಣ್ ಫ್ರೆಂಡ್ ಹೇಳಿದ್ದರು. ಅದಕ್ಕೆ ಅವರನ್ನು ಮೆಚ್ಚಬೇಕು ಎಂದು ವ್ಯಂಗ್ಯವಾಡಿದರು.

ಆರೆಸ್ಸೆಸ್ ಚಟುವಟಿಕೆ ನಿಷೇಧ ಕುರಿತ ಪ್ರಿಯಾಂಕ್ ಅವರ ಪತ್ರದ ಕುರಿತು ಪತ್ರಕರ್ತರು ಪ್ರಶ್ನಿಸಿದರು. ಮಲ್ಲಿಕಾರ್ಜುನ ಖರ್ಗೆಯವರು ಆರೆಸ್ಸೆಸ್ ಕಾರ್ಯಕ್ರಮಕ್ಕೆ ಯಾಕೆ ಹೋದರೆಂದು ಪ್ರಿಯಾಂಕ್ ಅವರು, ಅವರ ಅಪ್ಪನನ್ನು ಕೇಳಲಿ ಎಂದು ಸವಾಲು ಹಾಕಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್